ಚಿತ್ರದ ಟೈಟಲ್ ಹಾಗೂ ಪೋಸ್ಟರ್ ನಿಂದ ಪ್ರೇಕ್ಷಕರ ಗಮನ ಸೆಳೆದ ಬಹು ನಿರೀಕ್ಷಿತ ‘ರಾನಿ’ (Rani) ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಕಿರಣ್ ರಾಜ್ (Kiran Raj) ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಗುರುತೇಜ್ ಶೆಟ್ಟಿ (Gurutej Shetty) ಈ ಚಿತ್ರದ ನಿರ್ದೇಶಕರು. ಇತ್ತೀಚೆಗೆ ನಿರ್ದೇಶಕ ಗುರುತೇಜ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು (Birthday) ಚಿತ್ರತಂಡದ ಸದಸ್ಯರು ಚಿತ್ರೀಕರಣದ ಸೆಟ್ ನಲ್ಲಿ ಅದ್ದೂರಿಯಾಗಿ ಆಚರಿಸಿದರು.
ನಿರ್ದೇಶಕ ಗುರುತೇಜ್ ಶೆಟ್ಟಿ ಚಿತ್ರತಂಡ ರೆಡಿ ಮಾಡಿದ್ದ ಐವತ್ತು ಕೇಜಿ ಕೇಕ್ ಕಟ್ ಮಾಡಿ ಸಂಭ್ರಮಿಸಿದರು. ಸ್ಟಾರ್ ಕ್ರಿಯೇಷನ್ಸ್ ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಶೇಕಡಾ 90 ರಷ್ಟು ಮುಕ್ತಾಯವಾಗಿದೆ. ಬಹು ತಾರಾಗಣದ ಚಿತ್ರ ಇದಾಗಿದ್ದು, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ. ಇದನ್ನೂ ಓದಿ:ಮುದ್ದು ಮಗಳ ಜೊತೆಗಿನ ಚೆಂದದ ವೀಡಿಯೋ ಹಂಚಿಕೊಂಡ ಧ್ರುವ ಸರ್ಜಾ
ರವಿಶಂಕರ್, ಮೈಕೋ ನಾಗರಾಜ್, ನಾಗತಿ ಹಳ್ಳಿ ಚಂದ್ರಶೇಖರ್, ಬಿ ಸುರೇಶ, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್ ಹೆಗ್ಡೆ, ಪೃಥ್ವಿರಾಜ್, ಯಶ್ ಶೆಟ್ಟಿ, ಉಮೇಶ್, ಸುಜಯ್ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್ ಮಲಾನಿ, ಅನಿಲ್, ಧರ್ಮೆಂದ್ರ ಆರಸ್, ಮನಮೋಹನ್ ರೈ ಮುಂತಾದವರ ತಾರಾಬಳಗ ಚಿತ್ರಕ್ಕಿದೆ.