2023ರ ಆರ್ಥಿಕ ವರ್ಷದಲ್ಲಿ GDP ಬೆಳವಣಿಗೆ ಶೇ.7ಕ್ಕಿಂತ ಹೆಚ್ಚಾಗಲಿದೆ – RBI ಗವರ್ನರ್‌

Public TV
1 Min Read
Shaktikanta Das

ನವದೆಹಲಿ: 2023ರ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ (GDP) ಬೆಳವಣಿಗೆ ಶೇ.7ಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆರ್‌ಬಿಐ (RBI) ಗವರ್ನರ್‌ ಶಕ್ತಿಕಾಂತ ದಾಸ್ (Shaktikanta Das) ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಕಳೆದ ಹಣಕಾಸು ವರ್ಷದ 3 ಮತ್ತು 4ನೇ ತ್ರೈಮಾಸಿಕದಲ್ಲಿ ಆರ್ಥಿಕ ವೇಗ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ 2022-23ರ ಬೆಳವಣಿಗೆಯು 7 ಶೇಕಡಕ್ಕಿಂತ ಹೆಚ್ಚಾಗಿರುತ್ತದೆ. ಇದರಿಂದ ಅಚ್ಚರಿ ಪಡಬೇಕಾದುದ್ದಿಲ್ಲ. 2022-23 ರ ತಾತ್ಕಾಲಿಕ ವಾರ್ಷಿಕ ಅಂದಾಜುಗಳನ್ನು ಪ್ರಸಕ್ತ ವರ್ಷದ ಮೇ 31ರಂದು ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ.

GDP

ವಾಸ್ತವವಾಗಿ ಆರ್‌ಬಿಐ ಮೇಲ್ವಿಚಾರಣೆ ಮಾಡಿದಾಗ ಎಲ್ಲಾ ಹೆಚ್ಚಿನ ಆವರ್ತನ ಸೂಚಕಗಳಲ್ಲಿ, 4ನೇ ತ್ರೈಮಾಸಿಕದಲ್ಲಿ ಆರ್ಥಿಕ ವೇಗ ಕಾಯ್ದುಕೊಂಡಿರುವುದು ಗಮನಕ್ಕೆ ಬಂದಿದೆ. ಪ್ರಸಕ್ತ ವರ್ಷದಲ್ಲೇ ಆರ್‌ಬಿಐ ಶೇ.6.5ರಷ್ಟು ಪ್ರಗತಿ ದರ ನಿರೀಕ್ಷಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ – RBI ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

ಹಣದುಬ್ಬರ, ಬ್ಯಾಂಕಿಂಗ್‌ ಒತ್ತಡಗಳು ಹಾಗೂ ಜಾಗತಿಕ ಅನಿಶ್ಚಿತತೆಯ ನಡುವೆ ಭಾರತೀಯ ಬ್ಯಾಂಕಿಂಗ್‌ ವ್ಯವಸ್ಥೆಯು ಸ್ಥಿರವಾಗಿದೆ. ಉತ್ತಮವಾದ ಬಂಡವಾಳ ಹೂಡಿಕೆ, ಆಸ್ತಿಯ ಗುಣಮಟ್ಟ ಹಾಗೂ‌ ಸುಧಾರಿತ ಲಾಭದಾಯಕತೆ ಇವೆಲ್ಲವೂ ದೇಶದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿವೆ ಎಂದಿದ್ದಾರೆ.

RBI

ಆರ್‌ಬಿಐ ಮೇ 2022ರಿಂದ ರೆಪೊ ದರವನ್ನ 250 ಬೇಸಿಸ್‌ ಪಾಯಿಂಟ್‌ಗಳಷ್ಟು ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ವಿರಾಮ ನೀಡುವ ಸಾಧ್ಯತೆಗಳಿವೆ. ಆದ್ರೆ ಇದು ನನ್ನ ಕೈಯಲ್ಲಿ ಇಲ್ಲ. ಆರ್ಥಿಕ ಸ್ಥಿತಿಯನ್ನು ಅವಲಂಭಿಸಿರುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಹವಾಲಾ ಹಣದ ಮೇಲೆ ED, IT ನಿಗಾ – ಪೆಟ್ರೋಲ್ ಬಂಕ್ ಮೇಲೆ ಕಣ್ಣು

Share This Article