ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ (Kantara) ಸಿನಿಮಾದ ಸೂಪರ್ ಸಕ್ಸಸ್ ನಂತರ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ತಮ್ಮ ಹೊಸ ಹೆಜ್ಜೆ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಕೆರಾಡಿ’ ಹೆಸರಿನಲ್ಲಿ ಹೊಸ ಉದ್ಯಮಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ.
ನಟ, ನಿರ್ದೇಶಕ, ನಿರ್ಮಾಪಕನಾಗಿ ಸೈ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಅವರು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹೊಸ ಘೋಷಣೆ ಮಾಡಿದ್ದಾರೆ. ಒಂದು ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ. ‘ಕೆರಾಡಿ ಸ್ಟುಡಿಯೋಸ್’ (Keradi Studios) ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ ಎಂದು ರಿಷಬ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ:ಪೊಲೀಸ್ ಅಧಿಕಾರಿ ಜೊತೆ ನಟಿ ಡಿಂಪಲ್ ಹಯಾತಿ ಕಿರಿಕ್- ನಟಿಯ ವಿರುದ್ಧ ಬಿತ್ತು ಕೇಸ್
ಅಂದ ಹಾಗೆ ಕೆರಾಡಿ.. ನಾನು ಹುಟ್ಟಿ ಬೆಳೆದ, ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಊರು. ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನೊಳಗೆ ಸಿನಿಮಾದ ಕನಸು ಹುಟ್ಟಿದ್ದು ಇಲ್ಲೇ! ಈ ಪ್ರಯತ್ನವನ್ನು ನನ್ನ ಕೆರಾಡಿಗೆ ಅರ್ಪಿಸಿ, ಚಿತ್ರರಂಗಕ್ಕೆ ನಮ್ಮ ಅಳಿಲು ಸೇವೆಯನ್ನು ಮುಂದುವರೆಸಲಿದ್ದೇವೆ. ನಿಮ್ಮ ಸಹಕಾರವಿರಲಿ’ ಎಂದು ರಿಷಬ್ ಕೋರಿದ್ದಾರೆ.
View this post on Instagram
ರಿಷಬ್ ಶೆಟ್ಟಿ ಅವರು ಬಹುಮುಖ ಪ್ರತಿಭೆಯಾಗಿ ಸಿನಿಮಾ ಕ್ಷೇತ್ರದಲ್ಲಿ ಅವರು ಯಶಸ್ಸು ಕಂಡಿದ್ದಾರೆ. ಈಗ ಅವರು ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ಅವರು ಸಿನಿಮಾಗಳ ಪ್ರಚಾರಕ್ಕೆಂದು ಹೊಸ ವೇದಿಕೆ ಕಟ್ಟಿದ್ದಾರೆ. ನೆಚ್ಚಿನ ನಟ ರಿಷಬ್ ಹೊಸ ಕೆಲಸಕ್ಕೆ ಅಭಿಮಾನಿಗಳು ಶುಭಕೋರಿದ್ದಾರೆ. ಕಾಂತಾರ 2 ಸಿನಿಮಾದ ಅಪ್‌ಡೇಟ್‌ಗೆ ಎದುರು ನೋಡ್ತಿದ್ದಾರೆ.