ಪ್ರವೀಣ್ ನೆಟ್ಟಾರು ಪತ್ನಿ ಮರು ನೇಮಕ ಮಾಡ್ತೀವಿ – ಸಿದ್ದರಾಮಯ್ಯ

Public TV
1 Min Read
NUTHANA KUMARI SIDDARAMAIAH

ಬೆಂಗಳೂರು: ದಿ. ಪ್ರವೀಣ್ ನೆಟ್ಟಾರು (Praveen Nettaru) ಅವರ ಪತ್ನಿಯನ್ನು ಉದ್ಯೋಗದಿಂದ ವಜಾಗೊಳಿಸಲಾಗಿದೆ ಎಂದು ಬಿಜೆಪಿ (BJP) ನಾಯಕರು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಮರು ನೇಮಕ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಹೊಸ ಸರ್ಕಾರ ಆಡಳಿತಕ್ಕೆ ಬಂದಮೇಲೆ ಹಲವಾರು ತಾತ್ಕಾಲಿಕ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಅದರಲ್ಲಿ ಪ್ರವೀಣ್ ನೆಟ್ಟಾರು ಅವರ ಪತ್ನಿ ಕೂಡಾ ಒಬ್ಬರು. ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಬೊಮ್ಮಾಯಿ ಸರ್ಕಾರ ಇವರಿಗೆ ಸಿ ಗ್ರೂಪ್ ಹುದ್ದೆ ನೀಡಿತ್ತು. ಇದೀಗ ಅವರನ್ನು ಕೆಲಸದಿಂದ ವಜಾಗೊಳಿಸಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ನಿಟ್ಟಿನಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಟ್ವೀಟ್ (Tweet) ಮಾಡುವ ಮೂಲಕ ನೂತನ ಕುಮಾರಿ (Nuthana Kumari) ಅವರನ್ನು ಮರು ನೇಮಕ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಇನ್ನೂ ಖಾತೆ ಹಂಚಿಕೆ ಆಗಿಲ್ಲ; ನಕಲಿ ಪಟ್ಟಿ ಹಂಚಿಕೊಳ್ಳಬೇಡಿ – ಕಾಂಗ್ರೆಸ್‌ ಸ್ಪಷ್ಟನೆ

SIDDARAMAIAH TWEET

ಟ್ವೀಟ್‌ನಲ್ಲಿ ಏನಿದೆ?
ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನೂ ಓದಿ: ಸಚಿವರಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಸಚಿವದ್ವಯರ ಆಗಮನ

ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 135 ಕ್ಷೇತ್ರಗಳ ಮುಖ್ಯಮಂತ್ರಿಯಲ್ಲ: ಯಶ್‌ಪಾಲ್ ಸುವರ್ಣ

Share This Article