ಕನ್ನಡತಿ, ಬಹುಭಾಷಾ ನಟಿ ಪವಿತ್ರಾ ಲೋಕೇಶ್ (Pavitra Lokesh) ಅವರು ಸಿನಿಮಾಗಿಂತ ತಮ್ಮ ವೈಯಕ್ತಿಕ ವಿಚಾರವಾಗಿಯೇ ಹೆಚ್ಚು ಸುದ್ದಿಯಲ್ಲಿದ್ದಾರೆ. ಇದೀಗ ನಟಿ ಪವಿತ್ರಾ ಲೋಕೇಶ್ ಅವರು ಮಹತ್ವದ ನಿರ್ಧಾರವೊಂದನ್ನ ಕೈಗೊಂಡಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಹೆಚ್‌ಡಿ (Phd) ಪ್ರವೇಶ ಪರೀಕ್ಷೆ ಬರೆದಿದ್ದಾರೆ. ಕನ್ನಡ ಸಾಹಿತ್ಯದಲ್ಲಿ ಪಿಹೆಚ್‌ಡಿ ಮಾಡಲು ಪವಿತ್ರಾ ಲೋಕೇಶ್ ಅರ್ಜಿ ಸಲ್ಲಿಸಿದ್ದಾರೆ.
‘ಮಳ್ಳಿ ಪೆಳ್ಳಿ’ (Malli Pelli) ಸಿನಿಮಾ, ವೈಯಕ್ತಿಕ ಜೀವನ ವಿವಾದದ ನಡುವೆ ಪಿಹೆಚ್‌ಡಿ ಪ್ರವೇಶ ಪರೀಕ್ಷೆ ಬರೆಯಲು ಹಂಪಿಯ ವಿದ್ಯಾನಗರಕ್ಕೆ ಆಗಮಿಸಿದ ಪವಿತ್ರಾ ಲೋಕೇಶ್‌ಗೆ ನರೇಶ್ ಬಾಬು (Naresh Babu) ಸಾಥ್ ನೀಡಿದ್ದರು. ಪ್ರವೇಶ ಪರೀಕ್ಷೆ ಬರೆದಿದ್ದಾರೆ. ಬೆಳಗಾವಿ (Belaghavi) ವಿಸ್ತರಣಾ ಕೇಂದ್ರದ ಮೂಲಕ ಕನ್ನಡ ಸಾಹಿತ್ಯದಲ್ಲಿ ಪಿಹೆಚ್‌ಡಿ ಮಾಡಲು ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯದಲ್ಲಿ ಸಂಶೋಧನೆಗೆ ಪವಿತ್ರ ಲೋಕೇಶ್ ಮುಂದಾಗಿದ್ದಾರೆ. ಇದನ್ನೂ ಓದಿ:ಮಕ್ಕಳಿಗೆ ಗುಲಾಬಿ ಹೂ, ಚಾಕ್ಲೇಟ್ ನೀಡಿ ಸ್ವಾಗತಿಸಿದ ಡಾಲಿ
ಸದ್ಯ ‘ಮಳ್ಳಿ ಪೆಳ್ಳಿ’ ಚಿತ್ರದಲ್ಲಿ ನರೇಶ್ ಜೊತೆಯಾಗಿ ನಟಿಸಿರುವ ಪವಿತ್ರಾ ಲೋಕೇಶ್ ಅವರು ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಕನ್ನಡ ಸಾಹಿತ್ಯದತ್ತ ತೊಡಗಿಕೊಳ್ಳಲಿದ್ದಾರಾ? ಇದರ ನಡುವೆ ನಟನೆಯಲ್ಲಿ ಕೂಡ ಕಾಣಿಸಿಕೊಳ್ಳಲಿದ್ದಾರಾ? ಅನ್ನೋ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಸಿಕ್ಕಿಲ್ಲ.