ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿ ಅನ್ನೋ ಬಗ್ಗೆ ಚರ್ಚೆ ಮಾಡಿಲ್ಲ: ಜಗದೀಶ್ ಶೆಟ್ಟರ್

Public TV
1 Min Read
JAGADISH SHETTAR 1

ಹುಬ್ಬಳ್ಳಿ: ಕಾಂಗ್ರೆಸ್ (Congress) ಪಕ್ಷ ನನ್ನ ಜೊತೆಗಿದೆ ಎಂಬ ಭರವಸೆಯಿದೆ. ಲೋಕಸಭಾ ಚುನಾವಣೆಯಲ್ಲಿ (Loksabha Election) ನಾನು ಅಭ್ಯರ್ಥಿ ಎನ್ನುವ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಹೇಳಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar) ಅವರನ್ನು ಭೇಟಿಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆಯ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ. ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಸೌಹಾರ್ದತೆಯಿಂದ ನಾವು ಚರ್ಚೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಜೋಶ್‍ನಲ್ಲಿ ನನಗೂ ಫ್ರೀ ನಿನಗೂ ಫ್ರೀ ಅಂತ ಹೇಳಿದ್ದಾರೆ: ಶಿವಲಿಂಗೇ ಗೌಡ

ಡಿಕೆಶಿ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಚುನಾವಣಾ ತಯಾರಿ ಬಗ್ಗೆ ಕೆಲವು ಮಾತುಕತೆ ನಡೆಸಿದ್ದೇವೆ. ಅವರು ಸಹ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪಕ್ಷ ನನ್ನ ಜೊತೆಗಿದೆ ಎನ್ನುವ ಭರವಸೆಯನ್ನು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಾನು ಅಭ್ಯರ್ಥಿ ಎಂಬ ಬಗ್ಗೆ ಯಾವುದೂ ಚರ್ಚೆ ಮಾಡಿಲ್ಲ. ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಿದ್ದು, ಪಕ್ಷ ಸಂಘಟನೆಯ ಬಗ್ಗೆ ಹಲವು ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಮೊದಲು 15 ಲಕ್ಷ ಕೊಡಿ- ಸುನಿಲ್ ಕುಮಾರ್‌ಗೆ ರಾಮಲಿಂಗಾ ರೆಡ್ಡಿ ಟಾಂಗ್

Share This Article