IAS ವರ್ಸಸ್‌ IPS: ರೂಪಾ ಮೌದ್ಗಿಲ್‌ಗೆ ಜಾಮೀನು

Public TV
2 Min Read
ROOPA ROHINI SINDHURI

ಬೆಂಗಳೂರು: ತನ್ನ ವಿರುದ್ಧ ಐಎಎಸ್‌ (IAS) ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದ ಐಪಿಎಸ್‌ (IPS) ಅಧಿಕಾರಿ ರೂಪಾ ಮೌದ್ಗಿಲ್‌ಗೆ (Roopa Moudgil) ಜಾಮೀನು ಸಿಕ್ಕಿದೆ.

ರೂಪಾ ಮೌದ್ಗಿಲ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ರೋಹಿಣಿ ಸಿಂಧೂರಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ತನ್ನ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಬೇಕು ಎಂದು ರೂಪಾ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ರೋಹಿಣಿ ಜೊತೆ ಕಿತ್ತಾಟ – ಮಾತನಾಡದಂತೆ ರೂಪಾಗೆ ನೀಡಿದ್ದ ತಡೆ ತೆರವು

ROHINI SINDHURI ROOPA

ಪ್ರಕರಣಕ್ಕೆ ಸಂಬಂಧಿಸಿದಂತೆ 24 ನೇ ಎಸಿಎಂಎಂ ಕೋರ್ಟ್ ಹಾಲ್‌ಗೆ ಇಂದು ಐಪಿಎಸ್‌ ಅಧಿಕಾರಿ ರೂಪಾ ಹಾಜರಾದರು. ಕೋರ್ಟ್‌ಗೆ ಹಾಜರಾಗಿ ಜಾಮೀನು ರೂಪಾ ಜಾಮೀನು ಪಡೆದುಕೊಂಡಿದ್ದಾರೆ. ಪ್ರಕರಣದ ವಿಚಾರಣೆಯನ್ನು ಜೂನ್ 22 ಕ್ಕೆ ಮುಂದೂಡಲಾಗಿದೆ.

ಸೋಷಿಯನ್‌ ಮೀಡಿಯಾ ಮತ್ತು ಮಾಧ್ಯಮಗಳ ಮೂಲಕ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರು ಬಹಿರಂಗವಾಗಿ ಕಿತ್ತಾಟಕ್ಕೆ ಇಳಿದಿದ್ದರು. ರೋಹಿಣಿ ವಿರುದ್ಧ ರೂಪಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪ ಮಾಡಿದ್ದರು. ಬಳಿಕ ಇಬ್ಬರ ನಡುವೆ ಕಿತ್ತಾಟ ಜೋರಾಗಿತ್ತು. ಮುನೀಶ್‌ ಮೌದ್ಗಿಲ್‌ ಹೆಸರನ್ನೂ ರೂಪಾ ಆರೋಪಗಳಲ್ಲಿ ಉಲ್ಲೇಖಿಸಿದ್ದರು. ಅಧಿಕಾರಿಗಳು ಹೀಗೆ ಬಹಿರಂಗವಾಗಿ ಕಿತ್ತಾಡಬಾರದು ಎಂದು ಹಿರಿಯ ಅಧಿಕಾರಿಗಳು, ಸಚಿವರು ಸಲಹೆ ನೀಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಇಬ್ಬರಿಗೂ ಯಾವುದೇ ಹುದ್ದೆಯನ್ನು ತೋರಿಸದೇ ವರ್ಗಾವಣೆ ಮಾಡಲಾಗಿತ್ತು. ಇದನ್ನೂ ಓದಿ: ರೂಪಾ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಿದ ರೋಹಿಣಿ

ರೂಪಾ ಪತಿ ಮುನೀಶ್‌ ಮೌದ್ಗಿಲ್‌ ಅವರನ್ನು ಸಹ ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತರ ಹುದ್ದೆಯಿಂದ ವರ್ಗಾವಣೆ ಮಾಡಲಾಗಿತ್ತು.

Share This Article