ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್‌ ಎಂಗೇಜ್‌ಮೆಂಟ್

Public TV
2 Min Read
varun tej

ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಹಲವು ವರ್ಷಗಳ ಪ್ರೀತಿಗೆ ಟಾಲಿವುಡ್‌ನ ಯಂಗ್ ಕಪಲ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ (Lavanya Tripathi) ಉಂಗುರದ ಮುದ್ರೆ ಒತ್ತಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೂ ಈ ಜೋಡಿ ಬ್ರೇಕ್ ಹಾಕಿದ್ದಾರೆ. ಸದ್ಯ ಯಂಗ್ ಜೋಡಿಯ ಎಂಗೇಜ್‌ಮೆಂಟ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

varun tej 1

ಮೆಗಾ ಪ್ರಿನ್ಸ್ ವರುಣ್-ಲಾವಣ್ಯ ಮೊದಲು ಭೇಟಿಯಾಗಿದ್ದು, 2016ರಲ್ಲಿ ಬಳಿಕ 2017ರಲ್ಲಿ ಇಬ್ಬರು ‘ಮಿಸ್ಟರ್’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ವೇಳೆ ವರುಣ್ ತೇಜ್, ಲಾವಣ್ಯ ತ್ರಿಪಾಠಿ ಇಬ್ಬರೂ ಕ್ಲೋಸ್ ಆಗಿದ್ದರು. ಆರಂಭದಲ್ಲಿ ಸ್ನೇಹಿತರಾಗಿದ್ದವರು ಬರಬರುತ್ತಾ ಪ್ರೀತಿಯಲ್ಲಿ ಬಿದ್ದಿದ್ದರು.

varun tej

ಇಬ್ಬರೂ ಡೇಟಿಂಗ್ ಮಾಡುತ್ತಿದ್ದರೂ, ಅದು ಪಬ್ಲಿಕ್ ಆಗದಂತೆ ನೋಡಿಕೊಂಡಿದ್ದಾರೆ. ಹಲವು ವರ್ಷಗಳವರೆಗೂ ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯ ಗೊತ್ತೇ ಇರಲಿಲ್ಲ. ಆದರೆ, ‘ಅಂತರಿಕ್ಷಂʼ ಸಿನಿಮಾದ ವೇಳೆ ಇಬ್ಬರ ಬಗ್ಗೆ ಮೊದಲ ಬಾರಿಗೆ ಗಾಳಿಸುದ್ದಿ ಹಬ್ಬಿತ್ತು.ಅಲ್ಲಿಂದ ಎಂಗೇಜ್‌ಮೆಂಟ್ ಆಗುವವರೆಗೂ ರೂಮರ್ ಕಪಲ್ ಆಗಿದ್ದರು. ಇದನ್ನೂ ಓದಿ:4 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಸುಶ್ಮಿತಾ ಸೇನ್ ಸಹೋದರ ರಾಜೀವ್

varun tej

ಆಗಾಗ ವರುಣ್, ಲಾವಣ್ಯ ಇಬ್ಬರೂ ಕಾರ್ಯಕ್ರಮಗಳು ಹಾಗೂ ಪಾರ್ಟಿಗಳಲ್ಲಿ ಭೇಟಿಯಾಗುತ್ತಿದ್ದರು. ಇದು ಗಾಳಿಸುದ್ದಿಗೆ ಮತ್ತಷ್ಟು ತುಪ್ಪ ಸುರಿದಂತಾಗಿತ್ತು. ವರುಣ್, ತಮ್ಮ ಪ್ರೀತಿಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಬಯಸಿದ್ದರು. ಹೀಗಾಗಿ ಡಿಸೆಂಬರ್ 15 ಲಾವಣ್ಯ ಹುಟ್ಟುಹಬ್ಬದಂದು ಮದುವೆಗೆ ಪ್ರಪೋಸ್ ಮಾಡಿದ್ದರು. ಎರಡೂ ಮನೆಯವರು ಒಪ್ಪಿದರೂ, ಈ ಜೋಡಿ ಮದುವೆ ಬಗ್ಗೆ ಬಾಯ್ಬಿಟ್ಟಿರಲಿಲ್ಲ.

ಯಂಗ್ ಜೋಡಿ ವರುಣ್- ಲಾವಣ್ಯ ಅವರು ಹೈದರಾಬಾದ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿ ಎಂಗೇಜ್ ಆಗಿದ್ದಾರೆ. ಜೂನ್ ೯ರ ರಾತ್ರಿ ಎರಡು ಕುಟುಂಬದವರು ಆಪ್ತರಷ್ಟೇ ಭಾಗಿಯಾಗಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್ ಅವರ ಇಡೀ ಕುಟುಂಬ, ಅಲ್ಲು ಅರ್ಜುನ್ ಫ್ಯಾಮಿಲಿ, ವೆಂಕಟೇಶ್ವರ ರಾವ್ ಕುಟುಂಬದವರಷ್ಟೇ ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಸದ್ಯ ಎಂಗೇಜ್ ಆಗಿರುವ ಈ ಜೋಡಿ ಈ ವರ್ಷದ ಅಂತ್ಯದಲ್ಲಿ ಮದುವೆ ಆಗಲಿದ್ದಾರೆ.

ಎಂಗೇಜ್‌ಮೆಂಟ್‌ನಲ್ಲಿ (Engagement) ನಟಿ ಲಾವಣ್ಯ ಗಿಳಿ ಹಸಿರು ಸೀರೆಯಲ್ಲಿ ಮಿಂಚಿದ್ರೆ, ವರುಣ್ ಗೋಲ್ಡನ್ ಬಣ್ಣದ ಶೆರ್ವಾನಿಯಲ್ಲಿ ಹೈಲೆಟ್ ಆಗಿದ್ದಾರೆ. ನನ್ನ ಪ್ರೀತಿಯನ್ನ 2016ರಲ್ಲಿಯೇ ಕಂಡುಕೊಂಡಿದ್ದೆ ಎಂದು ನಟಿ ನಿಶ್ಚಿತಾರ್ಥದ ಫೋಟೋ ಸಮೇತ ಪೋಸ್ಟ್ ಮಾಡಿದ್ದಾರೆ. ಹೊಸ ಜೋಡಿಗೆ ಫ್ಯಾನ್ಸ್‌ ಶುಭಕೋರಿದ್ದಾರೆ.

Share This Article