Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: KERC ದರ ಏರಿಸಿದ್ದಕ್ಕೆ ವಿದ್ಯುತ್‌ ಬಿಲ್‌ ಹೆಚ್ಚಾಗಿದೆ: ಬೆಸ್ಕಾಂ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | KERC ದರ ಏರಿಸಿದ್ದಕ್ಕೆ ವಿದ್ಯುತ್‌ ಬಿಲ್‌ ಹೆಚ್ಚಾಗಿದೆ: ಬೆಸ್ಕಾಂ ಸ್ಪಷ್ಟನೆ

Districts

KERC ದರ ಏರಿಸಿದ್ದಕ್ಕೆ ವಿದ್ಯುತ್‌ ಬಿಲ್‌ ಹೆಚ್ಚಾಗಿದೆ: ಬೆಸ್ಕಾಂ ಸ್ಪಷ್ಟನೆ

Public TV
Last updated: June 11, 2023 7:33 pm
Public TV
Share
3 Min Read
Electricity 1
SHARE

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕಳೆದ ಮೇ 12 ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಬೆಸ್ಕಾಂ (BESCOM) ಜೂನ್ ತಿಂಗಳಲ್ಲಿ ನೀಡುವ ಮೇ ತಿಂಗಳ ವಿದ್ಯುತ್ ಬಳಕೆಯ ಬಿಲ್ ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿದೆ.

ವಿದ್ಯುತ್ ದರ (Electricity Price) ಪರಿಷ್ಕರಣೆ ಆದೇಶ ಏಪ್ರಿಲ್ ನಿಂದ ಪೂರ್ವನ್ವಯವಾಗುವುದರಿಂದ ಬಿಲ್ ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆಯೇ ಕೆಇಆರ್ ಸಿ ಆದೇಶದ ಪ್ರಕಾರ ಎರಡು ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್‌ ವಿದ್ಯುತ್‌ಗೆ ಪ್ರತಿ ಯೂನಿಟ್‌ ದರ 4.75 ರೂ. ವಿಧಿಸಲಾಗಿದೆ. 100 ಯೂನಿಟ್ ಮೀರಿದರೆ ಬಳಸಿದ ಅಷ್ಟೂ ಯೂನಿಟ್ ಗೆ ಎರಡನೇ ಶ್ರೇಣಿ ದರ ಪ್ರತಿ ಯೂನಿಟ್‌ ಗೆ 7 ರೂ. ಅನ್ವಯವಾಗಲಿದೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಬೆಸ್ಕಾಂ ತಿಳಿಸಿದೆ.

ಈ ಮೊದಲು ಮೂರು ಶ್ರೇಣಿ ದರಗಳಲ್ಲಿ (Telescopic) ಸಂಗ್ರಹಿಲಾಗುತ್ತಿತ್ತು. ಮೊದಲ 50 ಯೂನಿಟ್ ಗೆ 4.15 ರೂ., ನಂತರದ 50 ಯೂನಿಟ್ ಗೆ 5.6 ರೂ. ಹಾಗೂ 100 ಯೂನಿಟ್ ಮೀರಿದರೆ 7.15 ರೂ. ಸಂಗ್ರಹಿಸಲಾಗುತ್ತಿತ್ತು. ಇದೀಗ ಎರಡು ಶ್ರೇಣಿ ದರಗಳಲ್ಲಿ (Non-Telescopic) ಸಂಗ್ರಹಿಸಲು ಕೆಇಆರ್‌ಸಿ ಮೇ 12 ರಂದು ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.  ಇದನ್ನೂ ಓದಿ: ಒಡಿಶಾ ದುರಂತ – AI ತಂತ್ರಜ್ಞಾನ ಬಳಸಿ ಛಿದ್ರಗೊಂಡ ಮೃತದೇಹಗಳನ್ನು ರೈಲ್ವೇ ಪತ್ತೆ ಹಚ್ಚಿದ್ದು ಹೇಗೆ?

ಕೆಇಆರ್‌ಸಿ ದರ ಪರಿಷ್ಕರಣೆ ಆದೇಶದಲ್ಲಿ ನಿಗದಿತ ಶುಲ್ಕದಲ್ಲಿ 1 ರಿಂದ 50 ಕಿಲೋ ವ್ಯಾಟ್‌ ವಿದ್ಯುತ್‌ ಮಂಜೂರಾತಿ ಲೋಡ್‌ಗೆ 110 ರೂ. ಮತ್ತು 50 ಕೆವಿಗೆ ಮೇಲ್ಪಟ್ಟ ವಿದ್ಯುತ್‌ ಮುಂಜೂರಾತಿ ಲೋಡ್‌ ಗೆ 210 ರೂ. ನಿಗದಿ ಮಾಡಿದೆ.

ಕೆಇಆರ್‌ಸಿ ದರ ಪರಿಷ್ಕರಣೆ ಹೇಗೆ ಮಾಡುತ್ತೆ?
ಕೆಇಆರ್‌ಸಿ ದರ ನಿಯಂತ್ರಣ ಅಧಿಸೂಚನೆ 2006 ರ ಪ್ರಕಾರ ಎಲ್ಲಾ ಎಸ್ಕಾಂಗಳೂ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ಕೆಇಆರ್‌ಸಿ ಮುಂದೆ ಅರ್ಜಿ ಸಲ್ಲಿಸಬೇಕು.

ಅರ್ಜಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ಎಸ್ಕಾಂಗಳ ಮನವಿಯನ್ನು ಪರಿಗಣಿಸಿ ಕೆಇಆರ್‌ಸಿ ಪ್ರತಿ ವರ್ಷ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ದರ ಪರಿಷ್ಕರಣೆ ಆದೇಶವನ್ನು ನೀಡುತ್ತದೆ. ಇದು ಕೆಇಆರ್‌ಸಿ ಯ ಸಾಮಾನ್ಯ ನಡವಳಿಯಾಗಿದ್ದು, ಎಸ್ಕಾಂಗಳು ದರ ಪರಿಷ್ಕಣೆಗೆ ಅರ್ಜಿ ಸಲ್ಲಿಸದಿದ್ದ ಪಕ್ಷದಲ್ಲಿ ಕೆಇಆರ್‌ಸಿ ಸ್ವಯಂಪ್ರೇರಿತವಾಗಿ ವಿದ್ಯುತ್ ದರ ಏರಿಕೆ ಆದೇಶ ನೀಡಲು ಕಾನೂನಿನಲ್ಲಿ ಅವಕಾಶವಿದೆ.

ಈ ವರ್ಷದ ಮಾರ್ಚ್/ ಏಪ್ರಿಲ್‌ನಲ್ಲಿ ಜಾರಿಗೆ ಬರಬೇಕಿದ್ದ ದರ ಪರಿಷ್ಕರಣೆ ಆದೇಶವನ್ನು ಮಾರ್ಚ್ 29, 2023ರಂದು ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ಕೆಇಆರ್‌ಸಿ ತಡೆ ಹಿಡಿದಿತ್ತು. ಚುನಾವಣೆ ಮುಗಿದ ತಕ್ಷಣ, ಮೇ 12ರಂದು ದರ ಪರಿಷ್ಕರಣೆ ಮಾಡಿ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಜಾರಿಗೊಳಿಸಿ ಕೆಇಆರ್‌ಸಿ ಆದೇಶ ನೀಡಿತ್ತು.

2022ರ ನವೆಂಬರ್ ನಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ನೀಡಿದ್ದ ಮನವಿಯನ್ನು ಪುರಸ್ಕರಿಸಿ ಏಪ್ರಿಲ್ ತಿಂಗಳಿಂದ ಅನ್ವಯವಾಗುವಂತೆ ಪ್ರತಿ ಯೂನಿಟ್‌ಗೆ 70 ಪೈಸೆ ಯಷ್ಟು ಹೆಚ್ಚಳ ಮಾಡಿದ ಮೊತ್ತವನ್ನು ಜೂನ್ ತಿಂಗಳಲ್ಲಿ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.

ವಿದ್ಯುತ್ ದರ ಪರಿಷ್ಕರಣೆಯನ್ನು 2020ರ ನವೆಂಬರ್ 4 ರಂದು ಪ್ರತಿ ಯೂನಿಟ್‌ಗೆ 40 ಪೈಸೆ, ಜೂನ್ 6, 2021ರಂದು ಪ್ರತಿ ಯೂನಿಟ್‌ಗೆ 30 ಪೈಸೆ ಹಾಗೂ ಏಪ್ರಿಲ್ 4, 2022ರಂದು ಪ್ರತಿ ಯೂನಿಟ್‌ಗೆ 35 ಪೈಸೆಗಳಷ್ಟು ಹೆಚ್ಚಳ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿತ್ತು.

ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ (FPPCA) : ಕಾಲಕಾಲಕ್ಕೆ ಕೆಇಆರ್‌ಸಿ ಜಾರಿಗೊಳಿಸುವ ವಿದ್ಯುತ್ ದರ ಪರಿಷ್ಕರಣೆಗೂ ಮತ್ತು ಎಸ್ಕಾಂಗಳು ಜನರೇಟರ್ ಗಳಿಂದ ಖರೀದಿಸುವ ವಿದ್ಯುತ್ ಮೇಲಿನ ಇಂಧನ ವೆಚ್ಚದಲ್ಲಿನ ಬೆಲೆಯಲ್ಲಿ ವ್ಯತ್ಯಾಸ ಉಂಟಾಗುವುದಿರಂದ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಿಧಿಸಲು ಕೆಇಆರ್ ಸಿ ಎಸ್ಕಾಂಗಳಿಗೆ ಅನುಮತಿ ನೀಡುತ್ತದೆ.

ಕೇಂದ್ರ ಸರಕಾರ 2005ರ ವಿದ್ಯುಚ್ಚಕ್ತಿ ನಿಯಮಗಳಿಗೆ 2002ರ ಡಿಸೆಂಬರ್ 29 ರಂದು ತಿದ್ದುಪಡಿ ತಂದು ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಸಮಯಕ್ಕೆ ಸರಿಯಾಗಿ ಸಂಗ್ರಹಿಸಲು ಸೂಚಿಸಿತ್ತು.

ಈ ತಿದ್ದುಪಡಿ ಅನ್ವಯ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಪ್ರತಿ ತಿಂಗಳು ಗ್ರಾಹಕರಿಂದ ಸಂಗ್ರಹಿಸಲು ಕೆಇಆರ್‌ಸಿ ಫೆಬ್ರವರಿ 23, 2023ರಂದು ಅಧಿಸೂಚನೆ ಹೊರಡಿಸಿತ್ತು. ಹಾಗಾಗಿ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚವನ್ನು ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್ ಗೆ 59 ಪೈಸೆಯಷ್ಟು ವಿಧಿಸಲು ಕೆಇಆರ್‌ಸಿ ಅನುಮತಿ ನೀಡಿದ್ದು, ಈ ಮೊತ್ತವನ್ನು ಜೂನ್ ತಿಂಗಳಲ್ಲಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದ್ದಾರೆ.

TAGGED:BESCOMelectricitykarnatakaKERCಕೆಇಆರ್‍ಸಿಬೆಂಗಳೂರುಬೆಸ್ಕಾಂವಿದ್ಯುತ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

bhrain
Latest

Video | ಅಮೆರಿಕ ಸೇನಾ ನೆಲೆಯ ಮೇಲೆ ಮಿಸೈಲ್ ದಾಳಿ;‌ ಯುದ್ಧದ ಭೀಕರತೆ ಬಿಚ್ಚಿಟ್ಟ ಕನ್ನಡಿಗ ಸಫ್ವಾನ್‌

Public TV
By Public TV
15 seconds ago
Iran Ayatollah Ali Khamenei
Latest

ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

Public TV
By Public TV
12 minutes ago
Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
8 hours ago
P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
8 hours ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
8 hours ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?