ಚಿತ್ರದುರ್ಗ: ಇಲ್ಲಿನ ವಿಜಯಪುರ ಗೊಲ್ಲರಹಟ್ಟಿ ಗ್ರಾಮದ ಬಳಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂರು ತಿಂಗಳ ಮಗು ಸೇರಿ ಬೆಂಗಳೂರಿನ ಮೂವರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ಮೂರು ತಿಂಗಳ ಮಗು ಫಾತಿಮಾ, ತಾಯಿ ತಬ್ಸೂಮ್ ಹಾಗೂ ಸಂಬಂಧಿ ಜಾಕೀರ್ ಅಹ್ಮದ್ ಮೃತ ದುರ್ದೈವಿಗಳು. ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಬಡಾವಣೆ ನಿವಾಸಿಗಳು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ವಿದೇಶಿ ಪ್ರಜೆ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಿದ್ದ ಪುಂಡ ಅರೆಸ್ಟ್
ನಯಾಜ್, ಇಮ್ರಾನ್ ಖಾನ್, ತಬ್ರೀಜ್ ಅಹಮ್ಮದ್, ಸಬಾ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲ ಗೋವಾದಿಂದ ಬೆಂಗಳೂರಿಗೆ ಹಿಂದಿರುಗುವಾಗ ಭೀಕರ ಅಪಘಾತ ಸಂಭವಿಸಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಲಾರಿಗೆ ಅಪ್ಪಳಿಸಿದೆ. ಸ್ಥಳದಲ್ಲೇ ಮೂವರು ದುರ್ಮಣಕ್ಕೀಡಾದರು. ಗಂಭೀರ ಗಾಯಗೊಂಡಿರುವ ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಣ್ಣು ಕಿತ್ತು, ಕತ್ತು ಕೊಯ್ದು ನರ್ಸಿಂಗ್ ವಿದ್ಯಾರ್ಥಿನಿಯ ಕೊಲೆ – ಕರಾಳ ರಾತ್ರಿಯಲ್ಲಿ ನಡೆದಿದ್ದೇನು?