10 ರೂ. ಕೇಳಿದ್ದಕ್ಕೆ ಅಪ್ರಾಪ್ತ ಮಗನನ್ನು ಕತ್ತು ಹಿಸುಕಿ ಕೊಂದ ತಂದೆ

Public TV
1 Min Read
POLICE JEEP 1

ರಾಂಚಿ: 10 ರೂ. ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ 12 ವರ್ಷದ ಮಗನನ್ನು ಕತ್ತು ಹಿಸುಕಿ ಕೊಲೆಗೈದ ಪ್ರಕರಣ ಜಾಖಂಡ್‌ (Jharkhand) ಛತ್ರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಮೃತ ಬಾಲಕನನ್ನು ಪಪ್ಪು ಕುಮಾರ್ ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಬಿಲೇಶ್ ಭುಯಾನ್ (48) ಎಂದು ಗುರುತಿಸಲಾಗಿದೆ. ಮೃತನ 15 ವರ್ಷದ ಸಹೋದರಿ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಶಿಷ್ಟನಗರ ಪೊಲೀಸರು (Police) ಬಂಧಿಸಿದ್ದಾರೆ. ಇದನ್ನೂ ಓದಿ: ಎಚ್ಚರಿಕೆಯ ನಡುವೆಯು ಪ್ರವಾಸಿಗರ ಹುಚ್ಚಾಟ – ಮುರುಡೇಶ್ವರದಲ್ಲಿ ಸಮುದ್ರದ ಪಾಲಾದ ಯುವಕ, ಇಬ್ಬರ ರಕ್ಷಣೆ

ಬಾಲಕನ ಇಬ್ಬರೂ ಪೋಷಕರು ಬೆಳಗ್ಗೆ 9 ಗಂಟೆ ಸುಮಾರಿಗೆ ಮದ್ಯದ ಅಮಲಿನಲ್ಲಿದ್ದರು. ಈ ವೇಳೆ ಬಾಲಕ ತನ್ನ ತಂದೆಯೊಂದಿಗೆ 10 ರೂ. ಕೇಳಿದ್ದಾನೆ. ಇದರಿಂದ ಕೋಪಗೊಂಡ ಬಾಲಕನ ತಂದೆ ಆತನ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಸುಪ್ರೀಂ ತಡೆ

Share This Article