ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ

Public TV
1 Min Read
man brutally murdered in Shivamogga

ಶಿವಮೊಗ್ಗ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder) ಮಾಡಿರುವ ಘಟನೆ ನಗರದ ಇಲಿಯಾಜ್ ನಗರದಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಶಿವಮೊಗ್ಗ (Shivamogga) ನಗರದ ಮಂಡ್ಲಿ ನಿವಾಸಿ ಆಸೀಫ್ (25) ಎಂದು ಗುರುತಿಸಲಾಗಿದೆ. ಕೊಲೆಯಾದ ಆಸೀಫ್ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ. ಕೊಲೆ ಮಾಡಿದ ಆರೋಪಿ ಜಬೀ (25) ಎಂದು ಗುರುತಿಸಲಾಗಿದ್ದು, ಘಟನೆ ನಡೆದ ಕ್ಷಣಾರ್ಧದಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಜಬೀ ಸಹೋದರಿಯ ಪುತ್ರಿಯ ಹಿಂದೆ ಆಸೀಫ್ ಬಿದ್ದಿದ್ದ. ತನ್ನ ಸಹೋದರಿಯ ಪುತ್ರಿಗೆ ತೊಂದರೆ ನೀಡಬೇಡ ಎಂದು ಜಬೀ ಆಸೀಫ್ ಗೆ ಎಚ್ಚರಿಕೆ ನೀಡಿದ್ದ. ಆದರೂ ಆಸೀಫ್ ತನ್ನ ಚಾಳಿ ಮುಂದುವರಿಸಿದ್ದ. ಇದರಿಂದ ಕೆರಳಿದ ಜಬೀ ಬುಧವಾರ ರಾತ್ರಿ ಇಲಿಯಾಜ್ ನಗರದ 100 ಅಡಿ ರಸ್ತೆಯಲ್ಲಿ ಆಸೀಫ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾನೆ. ಇದನ್ನೂ ಓದಿ: ಸುಳ್ಳು ದೂರು ಸಲ್ಲಿಸಿ ವಂಚನೆ: ಪ್ರಶಾಂತ್‌ ಸಂಬರಗಿ ವಿರುದ್ಧ ಎಫ್‌ಐಆರ್‌


ಘಟನೆ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಕೊಲೆಯಾದ ಆಸೀಫ್ ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

Share This Article