ಆ.31 ರಿಂದ ಏಕದಿನ ಏಷ್ಯಾಕಪ್; ಲಂಕಾ, ಪಾಕ್ ಆತಿಥ್ಯ – ಬುಮ್ರಾ, ಅಯ್ಯರ್ ಕಂಬ್ಯಾಕ್ ಸಾಧ್ಯತೆ

Public TV
2 Min Read
Asia Cup 2023

ಮುಂಬೈ: ಭಾರೀ ಕುತೂಹಲ ಕೆರಳಿಸಿದ್ದ 2023ರ ಆವೃತ್ತಿಯ ಏಷ್ಯಾಕಪ್ (Asia Cup 2023) ಟೂರ್ನಿಯ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 17ರ ವರೆಗೆ ಏಷ್ಯಾಕಪ್ ಟೂರ್ನಿ ನಡೆಯಲಿದ್ದು, ಪಾಕಿಸ್ತಾನ (Pakistan) ಹಾಗೂ ಶ್ರೀಲಂಕಾ (SriLanka) ದೇಶಗಳು ಜಂಟಿ ಆತಿಥ್ಯ ವಹಿಸಲಿವೆ.

India

ಈ ಟೂರ್ನಿಯು ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 17ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿ ಏಷ್ಯಾಕಪ್ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯೇ ಇದ್ದರೂ, ಭಾರತ-ಪಾಕಿಸ್ತಾನದಲ್ಲಿ (Ind vs Pak) ಆಡಲು ಒಪ್ಪಿಗೆ ಸೂಚಿಸದ ಕಾರಣ ಟೂರ್ನಿಯನ್ನ ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಏಷ್ಯಾಕಪ್ ಕ್ರಿಕೆಟ್ ಸಮಿತಿ (ACC) ನಿರ್ಧರಿಸಿದೆ. ಇದನ್ನೂ ಓದಿ: ಮೋದಿ ಕ್ರೀಡಾಂಗಣದಲ್ಲಿ ಇಂಡೋ ಪಾಕ್ ಕದನ – ರಣರೋಚಕ ಪಂದ್ಯಕ್ಕಾಗಿ ಕಾಯ್ತಿದ್ದಾರೆ ಫ್ಯಾನ್ಸ್

INDvsPAK

ಟೂರ್ನಿಯಲ್ಲಿ ಒಟ್ಟು 6 ತಂಡಗಳು ಪಾಲ್ಗೊಳ್ಳಲಿದ್ದು, 3 ತಂಡಗಳ 2 ಗುಂಪು ರಚಿಸಲಾಗಿದೆ. ಭಾರತ, ಪಾಕಿಸ್ತಾನ ಮತ್ತು ನೇಪಾಳ `A’ ಗುಂಪಿನಲ್ಲಿದ್ದರೆ, ಶ್ರೀಲಂಕಾ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು `B’ ಗುಂಪಿನಲ್ಲಿ ಇರಲಿವೆ. ಎರಡು ಗುಂಪಿನಲ್ಲಿ ಅಗ್ರಸ್ಥಾನ ಪಡೆದ 2 ತಂಡಗಲು ಸೂಪರ್ ಫೋರ್ ಪ್ರವೇಶಿಸಲಿವೆ. ರಾಬಿನ್ ರೌಂಡ್ಸ್ ಮಾದರಿಯಲ್ಲಿ ನಡೆಯಲಿರುವ ಸೂಪರ್ ಫೋರ್ ಹಂತದಲ್ಲಿ ಅಗ್ರಸ್ಥಾನ ಪಡೆದ ಎರಡು ತಂಡಗಳು ಫೈನಲ್ ಪಂದ್ಯದಲ್ಲಿ ಸೆಣಸಲಿವೆ.

ಏಷ್ಯಾಕಪ್‌ನ 4 ಪಂದ್ಯಗಳು ಮಾತ್ರ ಪಾಕಿಸ್ತಾನದ ಲಾಹೋರ್‌ನಲ್ಲಿ ನಡೆಯಲಿದ್ದು, 9 ಪಂದ್ಯಗಳು ಶ್ರೀಲಂಕಾದ ಪಲ್ಲೆಕೆಲೆ ಹಾಗೂ ಕ್ಯಾಂಡಿನಗರಗಳಲ್ಲಿ ನಡೆಯಲಿದೆ. ಆದ್ರೆ ಪಂದ್ಯಗಳು ನಡೆಯವ ದಿನಾಂಕಗಳನ್ನ ಏಷ್ಯಾಕಪ್ ಕ್ರಿಕೆಟ್ ಸಮಿತಿ ಇನ್ನಷ್ಟೇ ಪ್ರಕಟಿಸಬೇಕಿದೆ. ಇದನ್ನೂ ಓದಿ: AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

IND vs PAK 2

ಬುಮ್ರಾ, ಅಯ್ಯರ್ ಕಂಬ್ಯಾಕ್ ಸಾಧ್ಯತೆ:
ಗಾಯದ ಸಮಸ್ಯೆಯಿಂದಾಗಿ T20 ವಿಶ್ವಕಪ್ (T20 Worldcup), 2023ರ ಐಪಿಎಲ್ ಟೂರ್ನಿ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಟೂರ್ನಿಗಳಲ್ಲಿ ಅವಕಾಶ ಕಳೆದುಕೊಂಡ ಭಾರತ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಏಕದಿನ ಏಷ್ಯಾಕಪ್ ವೇಳೆಗೆ ಟೀಂ ಇಂಡಿಯಾಕ್ಕೆ ಮರಳುವ ಸಾಧ್ಯತೆಯಿದೆ. ಜೊತೆಗೆ ಬಾರ್ಡರ್ ಗವಾಸ್ಕರ್ ಟ್ರೋಫಿ ವೇಳೆ ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾ ಟೆಸ್ಟ್ ತಂಡದಿಂದ ಹೊರಗುಳಿದ ಶ್ರೇಯಸ್ ಅಯ್ಯರ್ ಸಹ ಟೀಂ ಇಂಡಿಯಾಕ್ಕೆ ಉತ್ತಮ ಕಂಬ್ಯಾಕ್ ಮಾಡುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

Share This Article