ಮಣಿಪುರ ಹಿಂಸಾಚಾರ – ಕೇಂದ್ರ ಸಚಿವರ ಮನೆಗೆ ಬೆಂಕಿಯಿಟ್ಟ ಕಿಡಿಗೇಡಿಗಳು

Public TV
1 Min Read
Rajkumar Ranjan Singh Manipur Violence

ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ (Manipur) ಹೆಚ್ಚುತ್ತಿರುವ ಹಿಂಸಾಚಾರದ (Violence) ನಡುವೆ ಶುಕ್ರವಾರ ನಸುಕಿನ ವೇಳೆ ಇಂಫಾಲದಲ್ಲಿರುವ (Imphal) ಕೇಂದ್ರ ಸಚಿವ ರಾಜ್‌ಕುಮಾರ್ ರಂಜನ್ ಸಿಂಗ್ (Rajkumar Ranjan Singh) ಅವರ ಮನೆಗೆ ಕೆಲ ದುಷ್ಕರ್ಮಿಗಳು ಬೆಂಕಿ (Fires) ಹಚ್ಚಿದ್ದಾರೆ.

ಶುಕ್ರವಾರ ನಸುಕಿನ ವೇಳೆ ಈ ಘಟನೆ ನಡೆದಿದೆ. ಕಿಡಿಗೇಡಿಗಳು ಸಿಂಗ್ ಅವರ ಮನೆಗೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ. ಸದ್ಯ ಘಟನೆ ವೇಳೆ ಕೇಂದ್ರ ಸಚಿವರು ಮನೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Rajkumar Ranjan Singh

ಈ ವಾರದ ಆರಂಭದಲ್ಲಿ ರಾಜ್ಯ ಸಚಿವ ಹಾಗೂ ಬಿಜೆಪಿ ನಾಯಕ ನೆಮ್ಚಾ ಕಿಪ್ಗೆನ್ ಅವರ ಮನೆಗೂ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಇದರ ನಡುವೆ ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, ಈ ಬಗ್ಗೆ ಅನೇಕ ಹಂತಗಳಲ್ಲಿ ಚರ್ಚೆ ನಡೆಸಲಾಗುತ್ತಿದ್ದು, ಹಿಂಸಾಚಾರದಲ್ಲಿ ತೊಡಗಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ತ್ರಿವರ್ಣ ಧ್ವಜ ತೆಗೆದಿದ್ದ ಖಲಿಸ್ತಾನಿ ಉಗ್ರ ಅವತಾರ್ ಸಿಂಗ್ ನಿಗೂಢ ಸಾವು

ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೇಯಿ ಹಾಗೂ ಕುಕಿ ಸಮುದಾಯದ ನಡುವೆ ಕಳೆದ ಒಂದು ತಿಂಗಳಿನಿಂದ ಹಿಂಸಾಚಾರ ನಡೆಯುತ್ತಲೇ ಇದೆ. ಇದುವರೆಗೆ ಘಟನೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬುಧವಾರ ನಡೆದ ಹಿಂಸಾಚಾರದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮೇಘಸ್ಫೋಟದ ಆತಂಕ – ಜೂ.18, 19ರಂದು ಬೆಂಗ್ಳೂರಲ್ಲಿ ಭಾರೀ ಮಳೆಯ ಮುನ್ಸೂಚನೆ

Share This Article