ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru Mysuru Expressway) ಅಪಘಾತ (Accident) ಸಂಭವಿಸಿ ಆರ್ಬಿಐ ನೌಕರ (RBI employee) ಸಾವನ್ನಪ್ಪಿರುವ ಘಟನೆ ರಾಮನಗರ (Ramanagara) ಬಳಿಯ ಜೈಪುರ ಗೇಟ್ ಬಳಿ ನಡೆದಿದೆ.

ಡಿಕ್ಕಿ ರಭಸಕ್ಕೆ ಕಾರು ಸರ್ವಿಸ್ ರಸ್ತೆಗೆ ಉರುಳಿದ್ದು, ಜಗದೀಶ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಜಗದೀಶ್ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯೋಗದಿಂದ ಪರಿವರ್ತನೆ – ಅಂದು ಖೈದಿಯಾಗಿದ್ದಾತ ಈಗ ಯೋಗ ಗುರು
