ಪಠ್ಯಪುಸ್ತಕದಲ್ಲಿ ಸಾವರ್ಕರ್ ವಿಚಾರ ಕಡಿತದಿಂದ ವಿದ್ಯಾರ್ಥಿಗಳಿಗೆ ವಂಚನೆ: ರಂಜಿತ್ ಸಾವರ್ಕರ್

Public TV
1 Min Read
Ranjit Savarkar

ಪಣಜಿ: ಸಾವರ್ಕರ್ (VD Savarkar) ಕುರಿತಾದ ವಿಚಾರಗಳನ್ನು ಪಠ್ಯಪುಸ್ತಕಗಳಿಂದ (Textbook) ಕೈಬಿಡುವ ಕಾಂಗ್ರೆಸ್ (Congress) ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ಕಲಿಯುವ ಅವಕಾಶದಿಂದ ವಂಚಿತರಾಗುತ್ತಾರೆ ಎಂದು ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ (Ranjit Savarkar) ಹೇಳಿದ್ದಾರೆ.

ಗೋವಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸಾವರ್ಕರ್ ಅವರ ವಿಚಾರಗಳ ಮಾಹಿತಿ ಸಿಗುತ್ತದೆ. ಈಗಾಗಲೇ ಅವರ ಬರಹಗಳನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಮುಂದಿನ ದಿನಗಳಲ್ಲಿ ಆ ಬರಹಗಳನ್ನು ಕನ್ನಡದಲ್ಲೂ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಪ್ರತಿಭಟನೆಗೆ ತೆರಳುತ್ತಿದ್ದ ಸ್ವಾಮೀಜಿ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಯಾವುದನ್ನು ತಡೆಯಲು ಬಯಸುತ್ತೇವೆಯೋ ಅದು ಮತ್ತಷ್ಟು ಪ್ರಬಲಗೊಳ್ಳುತ್ತದೆ. ಪ್ರತಿಯೊಂದು ಕ್ರಿಯೆಗೂ ಅದರ ಸಮಾನ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂಬ ನ್ಯೂಟನ್‍ನ ಮೂರನೇ ನಿಯಮವನ್ನು ಉದಾಹರಣೆ ನೀಡಿದ್ದಾರೆ.

ಕರ್ನಾಟಕದ (Karnataka) ಕಾಂಗ್ರೆಸ್ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ನಡೆಸಲು ಮುಂದಾಗಿದೆ. 6 ರಿಂದ 10 ನೇ ತರಗತಿಯ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸರ್ಕಾರ ಅನುಮತಿ ನೀಡಿದೆ. ಆರ್‌ಎಸ್‌ಎಸ್ ಸಂಸ್ಥಾಪಕ ಕೆಬಿ ಹೆಡ್ಗೆವಾರ್ ಮತ್ತು ಸಾವರ್ಕರ್ ಸೇರಿದಂತೆ ಇತರರ ಅಧ್ಯಾಯಗಳನ್ನು ತೆಗೆದುಹಾಕಿರುವ ಸರ್ಕಾರದ ನಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಇದನ್ನೂ ಓದಿ: ಶಾಲಾ ಕಾಂಪೌಂಡ್ ಕುಸಿದು ವಿದ್ಯಾರ್ಥಿಗೆ ಗಂಭೀರ ಗಾಯ – 5 ಶಿಕ್ಷಕಿಯರಿಗೆ ಶೋಕಾಸ್ ನೋಟಿಸ್

Share This Article