ಆಸ್ತಿ ವಿವಾದ ವ್ಯಕ್ತಿಗೆ ಚಾಕು ಇರಿತ – 10 ದಿನಗಳ ಕಾಲ ಒದ್ದಾಡಿ ಪ್ರಾಣಬಿಟ್ಟ

Public TV
1 Min Read
YADGIR MURDER2

ಯಾದಗಿರಿ: ಆಸ್ತಿ ವಿವಾದ ಹಾಗೂ ವೈಯಕ್ತಿಕ ದ್ವೇಷದ ಹಿನ್ನೆಲೆ ನಡೆದಿದ್ದ ಗಲಾಟೆಯಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ವಡಗೇರಾದ (Wadgera) ಕುರಿಹಾಳ (Kurihal) ಗ್ರಾಮದಲ್ಲಿ ನಡೆದಿದೆ.

ಮರಿಲಿಂಗಪ್ಪ (45) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಜೂ.8 ರಂದು ಗಲಾಟೆ ನಡೆದಿದ್ದು, ಚಾಕು ಇರಿತಕ್ಕೆ ಒಳಗಾಗಿ ಮರಿಲಿಂಗಪ್ಪ ಗಂಭೀರ ಗಾಯಗೊಂಡಿದ್ದ. ಬಳಿಕ ಆತನನ್ನು ಕಲಬುರಗಿಯ (Kalaburagi) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 10 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ. ಈಗ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಭಾರೀ ಅನಾಹುತದಿಂದ ಮಹಾರಾಷ್ಟ್ರ ಸಚಿವರು ಜಸ್ಟ್ ಮಿಸ್

YADGIR MURDER

ಅದೇ ಗ್ರಾಮದ ಬಸವರಾಜ ಹಾಗೂ ಕುಟುಂಬದ 10 ಜನರಿಂದ ಮರಿಲಿಂಗಪ್ಪನ ಮೇಲೆ ದಾಳಿ ಮಾಡಲಾಗಿತ್ತು. ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನದ ಪ್ರಕರಣವೂ ದಾಖಲಾಗಿತ್ತು. ಈ ವೇಳೆ ಪ್ರಮುಖ ಆರೋಪಿ ಬಸವರಾಜ ಸೇರಿ 5 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಈ ಸಂಬಂಧ ಕೊಲೆ ಯತ್ನದ ಕೇಸ್‍ನ್ನು ಕೊಲೆ ಪ್ರಕರಣವಾಗಿ ದಾಖಲಿಸಲಾಗಿದೆ. ತಲೆ ಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಚುರುಕು – ಮುಂದಿನ 48 ಗಂಟೆಗಳ ಕಾಲ ಕರಾವಳಿ, ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Share This Article