ಮುಂಬೈ: ಆಪ್ರಾಪ್ತೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಮನೆಬಿಟ್ಟು ಹೋಗಿ ಕಿಡ್ನಾಪ್ (Kidnap) ಕಥೆ ಕಟ್ಟಿದ ಪ್ರಕರಣ ಮಹಾರಾಷ್ಟ್ರದ (Maharashtra) ಪಾಲ್ಘರ್‌ನಲ್ಲಿ ನಡೆದಿದೆ.
17 ವರ್ಷದ ಬಾಲಕಿ ತನ್ನ ಪ್ರೇಮಿಯೊಂದಿಗೆ ಮನೆಬಿಟ್ಟು ಕೋಲ್ಕತ್ತಾಗೆ ತೆರಳಿದ್ದಾಳೆ. ಬಳಿಕ ತನ್ನ ಸಹೋದರನಿಗೆ ವಾಟ್ಸಾಪ್ ಮೂಲಕ ವಾಯ್ಸ್ ಕಳಿಸಿದ್ದು, ತನ್ನನ್ನು ಅಪಹರಿಸಿದ್ದಾರೆ ಎಂದು ಹೇಳಿದ್ದಾಳೆ. ಈ ಬಗ್ಗೆ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ನಕಲಿ ಕಿಡ್ನಾಪ್ ಕಥೆಯನ್ನು ಬಯಲಿಗೆಳೆದಿದ್ದಾರೆ. ಇದನ್ನೂ ಓದಿ: ಭಾರೀ ಮಳೆಯಿಂದ ಭೂಕುಸಿತ – ಸಿಕ್ಕಿಂನಲ್ಲಿ ಸಿಲುಕಿದ್ದ 300 ಪ್ರವಾಸಿಗರನ್ನು ರಕ್ಷಿಸಿದ ಸೇನೆ
ಕಂಪನಿಯೊಂದರಲ್ಲಿ ಹೌಸ್‍ಕೀಪಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ ಶುಕ್ರವಾರ ಕೆಲಸಕ್ಕೆಂದು ತೆರಳಿದ್ದಳು. ಆದರೆ ಆ ದಿನ ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ನಂತರ ಆಕೆಯ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ಆರಂಭಿಸಿದ್ದರು. ಈ ವೇಳೆ ಅಪಹರಣದ ಸಂದೇಶ ಬಂದಿತ್ತು. ಬಳಿಕ ಈ ಬಗ್ಗೆ ಐಪಿಸಿ ಸೆಕ್ಷನ್ 363ರ ಅಡಿ ಅಪಹರಣ ಪ್ರಕರಣ ದಾಖಲಿಸಲಾಗಿತ್ತು.
ತನಿಖೆ ನಡೆಸಿದ್ದ ಪೊಲೀಸರು ಬಾಲಕಿ ತನ್ನ ಗೆಳೆಯನೊಂದಿಗೆ ಪಶ್ಚಿಮ ಬಂಗಾಳದ ಕೋಲ್ಕತ್ತಾಗೆ ವಿಮಾನದಲ್ಲಿ ತೆರಳಿರುವುದು ಪತ್ತೆಯಾಗಿತ್ತು. ಇಬ್ಬರ ಪತ್ತೆಗೆ ಪೊಲೀಸರ ತಂಡ ಕೋಲ್ಕತ್ತಾಗೆ (Kolkata) ತೆರಳಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಮಾವಿನ ಹಣ್ಣಿಗಾಗಿ ನಡೆದ ಗಲಾಟೆ- ಸಹೋದರರನ್ನು ಬಡಿದು ಕೊಂದ ದುಷ್ಕರ್ಮಿಗಳು