ರಾಮ್ ಚರಣ್ ಪತ್ನಿ ಉಪಾಸನಾಗೆ ತೊಟ್ಟಿಲು ಗಿಫ್ಟ್

Public TV
2 Min Read
ram charan upasana

ತೆಲುಗಿನ ಖ್ಯಾತ ನಟ ರಾಮ್ ಚರಣ್ (Ramcharan) ಹಾಗೂ ಉಪಾಸನಾ ದಂಪತಿ ತಮ್ಮ ಕುಟುಂಬಕ್ಕೆ ಮಗುವನ್ನು ಬರಮಾಡಿಕೊಳ್ಳಲು ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಿದ್ದಾರೆ. ತಮ್ಮ ಕುಟುಂಬದ ಕುಡಿಗಾಗಿ ಈಗಿನಿಂದಲೇ ಶಾಪಿಂಗ್ ಕೂಡ ಶುರು ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಉಪಾಸನಾ ಖುಷಿ ಸುದ್ದಿಯೊಂದನ್ನು ಹಂಚಿಕೊಂಡಿದ್ದು, ಪ್ರಜ್ವಲ್ ಫೌಂಡೇಶನ್ ತಮ್ಮ ಮಗುವಿಗಾಗಿ (Baby) ಸ್ಪೆಷಲ್ ತೊಟ್ಟಿಲನ್ನು (cradle) ಗಿಫ್ಟ್ ನೀಡಿರುವುದಾಗಿ ತಿಳಿಸಿದ್ದಾರೆ.

Ram charan with upasana 1

ಪ್ರಜ್ವಲ್ ಫೌಂಡೇಶನ್ (Prajwal Foundation) ನಲ್ಲಿ ಕೆಲಸ ಮಾಡುವ ಮಹಿಳೆಯರೇ ಈ ಸ್ಪೆಷಲ್ ತೊಟ್ಟಿಲನ್ನು (Tottilu) ರೆಡಿ ಮಾಡಿದ್ದು, ಅದು ಮರದ ತೊಟ್ಟಿಲಾಗಿದೆ. ಉಪಾಸನಾ ಮಗುವಿಗಾಗಿಯೇ ಅದನ್ನು ಸಿದ್ಧ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಅದೊಂದು ತೂಗು ತೊಟ್ಟಿಲಾಗಿದ್ದು ಕುಸುರಿ ಕೆಲಸವನ್ನೂ ಹೊಂದಿದೆ. ಇದನ್ನೂ ಓದಿ:ಅಪ್ಪ- ಅಮ್ಮನ ಕ್ಯೂಟ್ ಲವ್‌ ಸ್ಟೋರಿ ಹಂಚಿಕೊಂಡು ಮದುವೆ ವಾರ್ಷಿಕೋತ್ಸವಕ್ಕೆ ರಾಧಿಕಾ ವಿಶ್‌ ‌

Ram charan with upasana 2

ಉಪಾಸನಾ (Upasana) ಹೆರಿಗೆ ವಿಚಾರ ಹಲವು ದಿನಗಳಿಂದ ಚರ್ಚೆ ಆಗುತ್ತಲೇ ಇದೆ. ರಾಮ್ ಚರಣ್ ಕುಟುಂಬಕ್ಕೆ ಯಾವ ಮಗು ಬರಲಿದೆ ಎನ್ನುವ ಪ್ರಶ್ನೆಯನ್ನು ಕೂಡ ಅಭಿಮಾನಿಗಳು ಕೇಳಿದ್ದರು. ಇದೀಗ ಆ ಕುರಿತು ಸ್ವತಃ ಉಪಾಸನಾ ಅವರೇ ಉತ್ತರಿಸಿದ್ದಾರೆ. ಜುಲೈನಲ್ಲಿ (July) ಹೆರಿಗೆ (Delivery) ಆಗಲಿದೆ ಎಂದು ವೈದ್ಯರು ತಿಳಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

upasana

ಈ ಹಿಂದೆ ರಾಮ್ ಚರಣ್ ತೇಜ ಅವರ ಮೊದಲ ಮಗುವಿನ ಜನನ (Childbirth) ಯಾವ ದೇಶದಲ್ಲಿ ಆಗಲಿದೆ ಎನ್ನುವ ಕುರಿತು ಚರ್ಚೆ ನಡೆದಿತ್ತು. ಅಮೆರಿಕಾದಲ್ಲೇ ಅವರು ಮೊದಲ ಮಗುವಿನ ಜನನಕ್ಕೆ ತಯಾರಿ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಆಗಿತ್ತು. ರಾಮ್ ಚರಣ್ ಪತ್ನಿ ಉಪಾಸನಾ ಅವರ ಸಲಹೆ ಮೇರೆಗೆ ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿತ್ತು. ಇದೆಲ್ಲ ಊಹಾಪೋಹಗಳಿಗೂ ಉಪಾಸನಾ ಉತ್ತರಿಸಿದ್ದಾರೆ.

upasana

ರಾಮ್ ಚರಣ್ ಪತ್ನಿ ಉಪಾಸನಾ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ‘ಅಮೆರಿಕಾದಲ್ಲಿ ಹೆರಿಗೆಗೆ ತಯಾರಿ ಮಾಡಿಕೊಂಡಿದ್ದೇವೆ ಎನ್ನುವ ಸುದ್ದಿ ಸುಳ್ಳು. ಅದು ಯಾಕೆ ಈ ರೀತಿ ಹಬ್ಬಿತೋ ಗೊತ್ತಿಲ್ಲ. ನಮ್ಮ ಮಗುವಿನ ಜನನ ಭಾರತದಲ್ಲೇ ಆಗಲಿದೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದಿದ್ದಾರೆ. ಭಾರತದಲ್ಲೇ ನಮ್ಮ ಮಗು ಜನಿಸಲಿದೆ ಎಂದು ಅವರು ಹೇಳಿದ್ದಾರೆ.

upasana

ಹಾಲಿವುಡ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕಾಗಿ ರಾಮ್ ಚರಣ್ ಅಮೆರಿಕಾಗೆ ಹೋಗಿದ್ದರು. ಅಲ್ಲಿ ವಾಹಿನಿಯೊಂದರ ಸಂದರ್ಶನದಲ್ಲಿ ಮೊದಲ ಮಗುವಿನ ಜನನದ ಕುರಿತು ಮಾತನಾಡಿದ್ದಾರೆ. ಪತ್ನಿಯ ಹೆರಿಗೆಗಾಗಿ ಸಿದ್ಧರಾಗಿ ಎಂದು ವೈದ್ಯರೊಬ್ಬರಿಗೆ ಹೇಳಿದ್ದರು. ಈ ಕಾರಣದಿಂದಾಗಿಯೇ ಗೊಂದಲ ಮೂಡಿತ್ತು. ಅಮೆರಿಕಾದಲ್ಲೇ ಉಪಾಸನ ಮಗುವಿಗೆ ಜನ್ಮ ನೀಡಲಿದ್ದಾರೆ ಎನ್ನಲಾಗಿತ್ತು.

ರಾಮ್ ಚರಣ್ ಮತ್ತು ಉಪಾಸನಾ ದಂಪತಿ ತಡವಾಗಿ ಮಗು ಮಾಡಿಕೊಳ್ಳಲು ನಿರ್ಧರಿಸಿದ್ದರು. ಹಲವು ವರ್ಷಗಳ ನಂತರ ಉಪಾಸನಾ ಮಡಿಲಿಗೆ ಮಗು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ದೊಡ್ಡ ಆಸ್ಪತ್ರೆಯಲ್ಲೇ ಮಗುವಿನ ಜನನ ಆಗಲಿದೆ ಎಂದು ಊಹಿಸಲಾಗಿತ್ತು. ಅಮೆರಿಕಾ ವೈದ್ಯರ ಬಗ್ಗೆ ರಾಮ್ ಚರಣ್ ಮಾತನಾಡಿದ್ದರಿಂದ, ಅಮೆರಿಕಾದಲ್ಲಿ ಮಗುವಿನ ಜನನ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಇದೆಲ್ಲದಕ್ಕೂ ಉಪಾಸನಾ ಪ್ರತಿಕ್ರಿಯಿಸಿದ್ದಾರೆ.

Share This Article