ನವದೆಹಲಿ: ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮ ಸೇರಿದಂತೆ ಕೇಂದ್ರ ಪ್ರಾಯೋಜಕತ್ವದಲ್ಲಿ ರಾಜ್ಯದಲ್ಲಿ ಅನುಷ್ಠಾನ ಮಾಡಲಾಗುತ್ತಿರುವ ಇಲಾಖಾ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ (H.C.Mahadevappa) ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಕಾರ್ಯದರ್ಶಿ ಸೌರಭ್ ಗಾರ್ಗ್ ಭೇಟಿ ಮಾಡಿದ ಅವರು ಇ – ರುಪಿ ಯೋಜನೆಯ ಪೈಲಟ್ ಪ್ರಾಜೆಕ್ಟ್‌ಗೆ ಅನುಮತಿ ನೀಡಲು ಹಾಗೂ ರಾಜ್ಯದ ಹಲವು ಯೋಜನೆಗಳಿಗೆ ಅನುದಾನ ನೀಡುವ ವಿಚಾರದ ಬಗ್ಗೆ ಚರ್ಚೆ ನಡೆಸಿದರು. ಇದನ್ನೂ ಓದಿ: ಬಿಜೆಪಿ ಅವಧಿಯ ಬಿಡಿಎ, ಬಿಬಿಎಂಪಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚನೆ: ಡಿಕೆಶಿ ಮಹತ್ವದ ಸುಳಿವು
ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ವಿದ್ಯಾರ್ಥಿಗಳಿಗೆ 60:40 ಅನುಪಾತದಲ್ಲಿ ವಿದ್ಯಾರ್ಥಿ ವೇತನ (Scholorship) ನೀಡಲಾಗುತ್ತಿದೆ. ಕೇಂದ್ರ ಸರ್ಕಾರವು ತನ್ನ ಪಾಲಿನ 60% ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಬಿಡುಗಡೆ ಮಾಡುತ್ತಿರುವ ಹಿನ್ನಲೆ ವಿದ್ಯಾರ್ಥಿಗಳು ಕಾಲೇಜಿಗೆ ಪಾವತಿಸಬೇಕಾದ ಶುಲ್ಕುವನ್ನು ನೀಡುತ್ತಿಲ್ಲ ಎಂದರು. ಇದನ್ನೂ ಓದಿ: ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ
ಈ ಹಿಂದೆ ಸ್ಕಾಲರ್‌ಶಿಪ್ ಹಣವನ್ನು ಇಲಾಖೆಯಿಂದ ಕಾಲೇಜು ಶುಲ್ಕ ಪಾವತಿಗೆ ವರ್ಗಾಯಿಸಲಾಗುತ್ತಿತ್ತು. ಆದರೆ 2021-22ರಿಂದ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಹಣ ವರ್ಗಾವಣೆಯಾಗುತ್ತಿರುವ ಹಿನ್ನಲೆ ವಿದ್ಯಾರ್ಥಿಗಳು ಶುಲ್ಕ ಪಾವತಿ ಮಾಡುತ್ತಿಲ್ಲ. ಈ ಬಗ್ಗೆ ದೂರುಗಳು ಹೆಚ್ಚುತ್ತಿದೆ. ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ದಾಖಲಾತಿ ಸಂದರ್ಭದಲ್ಲಿ ಪೂರ್ಣ ಪ್ರಮಾಣ ಶುಲ್ಕ ಪಾವತಿಸಲು ಶಿಕ್ಷಣ ಸಂಸ್ಥೆಗಳು ಸೂಚಿಸಿದ್ದು, ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಹಾಳಾಗುವ ಸಾಧ್ಯತೆಗಳಿದೆ. ಈ ಹಿನ್ನಲೆ ಇ- ರುಪಿ ವ್ಯವಸ್ಥೆಯನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬ್ರ‍್ಯಾಂಡ್ ಬೆಂಗಳೂರು ಕಟ್ಟಲು ನೀವೂ ಕೊಡಿ ಸಲಹೆ: ಸಾರ್ವಜನಿಕರಲ್ಲಿ ಡಿಕೆಶಿ ಮನವಿ
ಕರ್ನಾಟಕದಲ್ಲಿ ಇ – ರುಪಿ ಈಗಾಗಲೇ ಕೊಪ್ಪಳ (Koppal) ಸೇರಿದಂತೆ ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕ ಪ್ರಯೋಗ ಮಾಡುತ್ತಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಪ್ರಾಯೋಗಿಕ ಪ್ರಯೋಗ ಕರ್ನಾಟಕದಲ್ಲಿ ಮಾಡಬೇಕು. ಬಳಿಕ ಎಲ್ಲ ರಾಜ್ಯಗಳಿಗೂ ಇದನ್ನು ವಿಸ್ತರಿಸಬಹುದು. ಈ ಹಿನ್ನಲೆ ಪೈಲಟ್ ಪ್ರಾಜೆಕ್ಟ್ ನೀಡುವಂತೆ ಅವರು ಮನವಿ ಮಾಡಿದರು. ಇದನ್ನೂ ಓದಿ: ಸರ್ವರ್ ಹ್ಯಾಕ್ ಹೇಳಿಕೆ – ರಾಜಕೀಯದಲ್ಲಿ ಇಂತಹ ಸ್ಟೇಟ್‌ಮೆಂಟ್‌ಗಳು ಇದ್ದೇ ಇರುತ್ತೆ: ಸತೀಶ್ ಜಾರಕಿಹೊಳಿ ಯೂಟರ್ನ್
ಬಾಬು ಜಗಜೀವನ್ ರಾಮ್ ಛಾತ್ರವಾಸ್ ಯೋಜನೆ ಅಡಿಯಲ್ಲಿ ನೂರು ವಿದ್ಯಾರ್ಥಿಗಳ ವಸತಿ ನಿಲಯಕ್ಕೆ 3 ಕೋಟಿಯಂತೆ ಅನುದಾನ ನೀಡಲಾಗುತ್ತಿದೆ. ರಾಜ್ಯ ಲೋಕೋಪಯೋಗಿ ಇಲಾಖೆಯಿಂದ 6.50 ಕೋಟಿ ರೂ. ಅನುದಾನ ನಿಗದಿ ಮಾಡಿದ್ದು, ಕೇಂದ್ರದಿಂದ 6.50 ಕೋಟಿ ರೂ. ನೀಡುವಂತೆ ಪ್ರಸ್ತಾವನೆಯನ್ನು ಸಲ್ಲಿಸಿದರು. ಇದನ್ನೂ ಓದಿ: ಅಕ್ಕಿ ಕೊಡಲು ಆಗದಿದ್ರೆ ಅಧಿಕಾರ ಬಿಟ್ಟು ತೊಲಗಿ: ಕಾಂಗ್ರೆಸ್ ವಿರುದ್ಧ ಶೋಭಾ ಕಿಡಿ