ICC ODI World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಪ್ರಕಟ

Public TV
2 Min Read
ICC ODI World Cup 2023

– ಅ.15 ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ

ಮುಂಬೈ: ಭಾರತದಲ್ಲಿ ನಡೆಯಲಿರುವ ಈ ಬಾರಿಯ 2023ರ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ (ICC ODI World Cup 2023) ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ICC) ಮುಂಬೈನಲ್ಲಿ ಇಂದು ಬಿಡುಗಡೆ ಮಾಡಿದೆ.

ಅಕ್ಟೋಬರ್‌ 5 ರಿಂದ ನವೆಂಬರ್‌ 19 ರವರೆಗೆ ಟೂರ್ನಿ ನಡೆಯಲಿದೆ. ದೇಶದ 10 ನಗರಗಳಲ್ಲಿ ಟೂರ್ನಿ ನಡೆಯಲಿದ್ದು, ಟೂರ್ನಿಯ ಉದ್ಘಾಟನಾ ಮ್ಯಾಚ್‌ ಹಾಗೂ ಫೈನಲ್‌ ಪಂದ್ಯವು ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿದೆ. ಇದನ್ನೂ ಓದಿ: ವಿಂಡೀಸ್‌ ವಿರುದ್ಧ T20 ಸರಣಿ – ಟೀಂ ಇಂಡಿಯಾಕ್ಕೆ ರಿಂಕು ಸಿಂಗ್‌ ಆಯ್ಕೆ?

icc world cup

 

ಕಳೆದ ಬಾರಿ ಚಾಂಪಿಯನ್‌ ಆಗಿದ್ದ ಇಂಗ್ಲೆಂಡ್‌ ಹಾಗೂ ರನ್ನರ್‌ ಅಪ್‌ ಆಗಿದ್ದ ನ್ಯೂಜಿಲೆಂಡ್‌ ತಂಡಗಳು ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಸೆಣಸಲಿವೆ. ಈ ಬಾರಿ ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತವು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್‌ 8 ರಂದು ತನ್ನ ಮೊದಲ ಪಂದ್ಯವನ್ನು ಆಡಲಿದೆ.

ಅ.15ಕ್ಕೆ ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ
ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್‌ ತಂಡಗಳ ಹೈವೋಲ್ಟೇಜ್‌ ಪಂದ್ಯವು ಅ.15 ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡವನ್ನು ರೋಹಿತ್‌ ಶರ್ಮಾ ಹಾಗೂ ಪಾಕಿಸ್ತಾನ ತಂಡವನ್ನು ಬಾಬರ್‌ ಅಜಂ ಮುನ್ನಡೆಸಲಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನಲ್ಲಿ ಕಣಕ್ಕಿಳಿಯುತ್ತಾ ಪಾಕ್‌ ತಂಡ – ಭದ್ರತೆ ಕಾರಣ ನೀಡಿದ್ರೆ ಸ್ಥಳ ಬದಲಾವಣೆ ಮಾಡಬಹುದು ಎಂದ ಅಶ್ವಿನ್‌

ಟೂರ್ನಿಯಲ್ಲಿ 10 ತಂಡಗಳು
ವಿಶ್ವಕಪ್‌ ಟೂರ್ನಿಯಲ್ಲಿ 10 ತಂಡಗಳು ಕಣಕ್ಕಿಳಿಯಲಿವೆ. ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್‌, ಇಂಗ್ಲೆಂಡ್‌, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿಕೊಂಡಿದ್ದು, ನೇರವಾಗಿ ಟೂರ್ನಿಯಲ್ಲಿ ಆಡಲಿವೆ. ಉಳಿದೆರಡು ಸ್ಥಾನಕ್ಕಾಗಿ ವೆಸ್ಟ್‌ ಇಂಡೀಸ್‌, ಶ್ರೀಲಂಕಾ, ಜಿಂಬಾಬ್ವೆ ತಂಡಗಳು ಪೈಪೋಟಿ ನಡೆಸುತ್ತಿವೆ.

ಯಾವ ನಗರಗಳಲ್ಲಿ ಟೂರ್ನಿ ನಡೆಯುತ್ತೆ?
ಬೆಂಗಳೂರು, ಹೈದರಾಬಾದ್‌, ಪುಣೆ, ಲಖನೌ, ಅಹಮದಾಬಾದ್‌, ದೆಹಲಿ, ಧರ್ಮಶಾಲಾ, ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

Share This Article