ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯಗೆ ನೋಟಿಸ್

Public TV
1 Min Read
Renukacharya

ಬೆಂಗಳೂರು: ಮಾಜಿ ಸಚಿವ ರೇಣುಕಾಚಾರ್ಯಗೆ (MP Renukacharya) ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ನೋಟಿಸ್ ನೀಡಿದೆ.

ಪಕ್ಷ ವಿರೋಧಿ ಹೇಳಿಕೆಗಳ ಕುರಿತು ಮಾಜಿ ಸಚಿವರಿಗೆ ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ನೋಟಿಸ್ ನೀಡಿದ್ದಾರೆ. ಅಲ್ಲದೆ ಈ ನೋಟಿಸ್ ತಲುಪಿದ ಒಂದು ವಾರದೊಳಗಾಗಿ ತಾವು ಉತ್ತರವನ್ನು ಲಿಖಿತ ರೂಪದಲ್ಲಿ ನೀಡಬೇಕೆಂದು ಸೂಚಿಸಲಾಗಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ನೋಂದಣಿಗೆ ಮುನ್ನವೇ ಸುಲಿಗೆ- ಮನೆ ಮನೆಗೆ ತೆರಳಿ 150 ರೂ. ವಸೂಲಿ

ಪಕ್ಷ ವಿರೋಧಿ ಹೇಳಿಕೆಗಳ ವಿಷಯಕ್ಕೆ ಸಂಬಂಧಿಸಿದಂತೆ ತಮಗೆ ಪಕ್ಷ ಸಾಕಷ್ಟು ಬಾರಿ ತಿಳಿ ಹೇಳಿದರೂ ಕೇಳುತ್ತಿಲ್ಲ. ತಾವು ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರುಗಳ ವಿರುದ್ಧ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದೀರಿ. ಇದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿದ್ದು, ತಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ಈ ನೋಟಿಸನ್ನು ನೀಡಲಾಗಿದೆ.

Web Stories

Share This Article