ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದಲ್ಲಿ ವೈಎಸ್‍ಟಿ ಟ್ಯಾಕ್ಸ್ (YST Tax) ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) ಬಾಂಬ್ ಸಿಡಿಸಿದ್ದಾರೆ. ಕಳೆದ ವಾರ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಬಾಂಬ್ ಸಿಡಿಸಿದ್ದ ಅವರು, ಸರ್ಕಾರದ ವಿರುದ್ಧ ವರ್ಗಾವಣೆ ಆರೋಪವನ್ನು ಮುಂದುವರೆಸಿದ್ದಾರೆ.
ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಹೊಸ ಟ್ಯಾಕ್ಸ್ ಜಾರಿಯಾಗಿದೆ. ದೇಶದಲ್ಲಿ ಜಿಎಸ್‍ಟಿ ಟ್ಯಾಕ್ಸ್ ಇರುವ ಹಾಗೆ ಈ ಸರ್ಕಾರದಲ್ಲಿ ವೈಎಸ್‍ಟಿ ಟ್ಯಾಕ್ಸ್ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಅವಕಾಶ ಕೊಟ್ಟರೆ ನಾನೂ ಮಾಡ್ತೀನಿ: ವಿಪಕ್ಷ ನಾಯಕ ಸ್ಥಾನ ಆಕಾಂಕ್ಷೆ ಹೊರಹಾಕಿದ ಅಶ್ವಥ್ ನಾರಾಯಣ್
ನಾನು ಸಿಎಂ ಆಗಿದ್ದಾಗ 5 ರೂ. ಕೂಡ ತೆಗೆದುಕೊಳ್ಳದೆ ವರ್ಗಾವಣೆ ಮಾಡಿದ್ದೇನೆ. ನನಗೆ ನೈತಿಕತೆ ಇದೆ. ನಾನು ಭಯ ಬೀಳುವ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧವೂ ಕಿಡಿಕಾರಿದ್ದಾರೆ.
ಕಳೆದ ವಾರ ಅತೀಂದ್ರಿಯ ಶಕ್ತಿ ವರ್ಗಾವಣೆ ದಂಧೆ ನಡೆಸುತ್ತಿದೆ ಎಂದು ಆರೋಪ ಮಾಡಿದ್ದರು. ಈಗ ವೈಎಸ್‍ಟಿ ಟ್ಯಾಕ್ಸ್ ಎಂದು ಆರೋಪ ಮಾಡುತ್ತಿದ್ದಾರೆ. ಈ ನೂತನ ಟ್ಯಾಕ್ಸ್ ಯಾವುದು ಎನ್ನುವ ಕುತೂಹಲ ಜನರಲ್ಲಿ ಮೂಡಿದೆ. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರದಲ್ಲಿ ನನಗೆ ವರ್ಗಾವಣೆ ಮಾಡೋ ಅಧಿಕಾರವೇ ಇರಲಿಲ್ಲ – ಹೆಚ್ಡಿಕೆ
Web Stories