ಹಾಡಹಗಲೇ ಯುವಕನ ಮೇಲೆ ಪುಂಡರ ಅಟ್ಯಾಕ್

Public TV
1 Min Read
CCTV

ಬೆಂಗಳೂರು: ಹಾಡಹಗಲೇ ಯುವಕನ ಮೇಲೆ ಪುಂಡರ ಗ್ಯಾಂಗ್‌ವೊಂದು ಏಕಾಏಕಿ ಅಟ್ಯಾಕ್ (Attack) ಮಾಡಿದ್ದು, ದೊಣ್ಣೆ ಮತ್ತು ಬ್ಯಾಟ್‌ನಿಂದ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಕಾಟನ್ ಪೇಟೆಯ (Cottonpete) ಜಾಲಿ ಮೊಹಲ್ಲಾದಲ್ಲಿ ನಡೆದಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ದಿನೇ ದಿನೇ ಪುಂಡರ ಅಟ್ಟಹಾಸ ಹೆಚ್ಚುತ್ತಿದ್ದು, ಬಿಬಿಎಂಪಿ (BBMP) ಕಸದ ಆಟೋ ಚಾಲಕ ಸತೀಶ್ ಎಂಬಾತನ ಮೇಲೆ ಪುಂಡರ ಗುಂಪೊಂದು ಏಕಾಏಕಿ ಹಲ್ಲೆ ಮಾಡಿದೆ. ಚಾಲಕ ಸತೀಶ್ 11 ಗಂಟೆಯ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಈ ವೇಳೆ ರಾಜೇಂದ್ರ, ಮನು ಮತ್ತು ಗ್ಯಾಂಗ್ ಸೇರಿಕೊಂಡು ಜಾಲಿ ಮೊಹಲ್ಲಾ ರಸ್ತೆಯಲ್ಲಿ ಚಾಲಕ ಸತೀಶ್ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್

ಕ್ರಿಕೆಟ್ ಬ್ಯಾಟ್ ಮತ್ತು ದೊಣ್ಣೆಯಿಂದ ಚಾಲಕನ ಮೇಲೆ ಹಲ್ಲೆ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪುಂಡರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಹಲ್ಲೆಯಿಂದ ಚಾಲಕ ಸತೀಶ್‌ಗೆ ಗಂಭೀರ ಗಾಯಗಳಾಗಿದ್ದು, ಹಲ್ಲೆ ನಡೆಸಿದ ರಾಜೇಂದ್ರ, ಮನು ಮತ್ತು ಗ್ಯಾಂಗ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇದನ್ನೂ ಓದಿ: ವಂದೇ ಭಾರತ್ ರೈಲಿಗೆ ಕಲ್ಲು ಹೊಡೆತ – ಮಕ್ಕಳಿಬ್ಬರು ಪೊಲೀಸರ ವಶಕ್ಕೆ

ಕಿಡಿಗೇಡಿಗಳು ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಪರ ಸ್ತ್ರೀ ಜೊತೆ ತಂದೆಯ ದೈಹಿಕ ಸಂಪರ್ಕ ವಿಡಿಯೋ ವೈರಲ್ – ಮನನೊಂದು ಮಗ ಆತ್ಮಹತ್ಯೆ

Web Stories

Share This Article