ಧಾರಾಕಾರ ಮಳೆಗೆ ಉಡುಪಿಯಲ್ಲಿ ಮತ್ತೊಂದು ಬಲಿ

Public TV
1 Min Read
UDUPI RAIN

ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಮತ್ತೊಂದು ಬಲಿಯಾಗಿದೆ. ಉಡುಪಿ ಜಿಲ್ಲೆಯ (Rain in Udupi) ಕಾರ್ಕಳ ತಾಲೂಕಿನ ಬೆಳ್ಮಣ್ ಪರಿಸರದಲ್ಲಿ ಈ ದುರ್ಘಟನೆ ನಡೆದಿದೆ.

ಮೃತರನ್ನು ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಭಾರೀ ಗಾಳಿ ಮಳೆಯ ಹಿನ್ನೆಲೆಯಲ್ಲಿ ಬೃಹತ್ ಆಲದ ಮರ ಬಿದ್ದು ಬೈಕ್ ಸವಾರ ಮೃತಪಟ್ಟಿದ್ದಾರೆ.

ಪ್ರವೀಣ್ ಆಚಾರ್ಯ ಅವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಭಾರೀ ಗಾತ್ರದ ಆಲದ ಮೇಲೆ ಅವರ ಮೇಲೆ ಬಿದ್ದಿದೆ. ಮರ ಬಿದ್ದ ಹಿನ್ನೆಲೆ ವಿದ್ಯುತ್ ಕಂಬ ಸೇರಿದಂತೆ ಇತರ ಕಟ್ಟಡಗಳಿಗೂ ಹಾನಿಯಾಗಿದೆ. ಮರ ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮರ ಬಿದ್ದು ಗಾಯಗೊಂಡ ಪ್ರವೀಣ್ ಅವರನ್ನು ಕೂಡಲೇ ಸಥಳೀಯ ಆಸ್ಪತ್ರೆಗೆ ದಾಖಲಾಯಿಸಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಈ ಹಿಂದೆ ಹೋಟೆಲ್ ನಲ್ಲಿ ಕ್ಯಾಷರ್ ಆಗಿದ್ದ ದಿವಾಕರ್ ಶೆಟ್ಟಿ ರಾತ್ರಿ ಕೆಲಸ ಮುಗಿಸಿ ಮನೆಗೆ ಬರುತ್ತಿರುವ ಸಂದರ್ಭದಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಅಲ್ಲದೆ ಕುಂದಾಪುರ ತಾಲೂಕಿನ ಕಮಲಶಿಲೆ ದೇವಸ್ಥಾನದ ಹಿರಿಯ ಅರ್ಚಕ ಶೇಷಾದ್ರಿ ಐತಾಳ್ ನೀರಿನಲ್ಲಿ ಕೊಚ್ಚಿ ಹೋಗಿ ಸಾವನಪ್ಪಿದ್ದರು. ಎಂದಿನಂತೆ ದೇವಸ್ಥಾನಕ್ಕೆ ಪೂಜೆಗೆ ಬರುತ್ತಿದ್ದ ಸಂದರ್ಭ ಕುಬ್ಜ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯನ್ನು ದಾಟುವ ಸಂದರ್ಭ ಈ ಅವಘಡ ಸಂಭವಿಸಿತ್ತು.

Share This Article