ಅಹಮದಾಬಾದ್: ಮಾನನಷ್ಟ ಪ್ರಕರಣದಲ್ಲಿ (Defamation Case) ಸೂರತ್ ನ್ಯಾಯಾಲಯ (Surat Court) ನೀಡಿದ್ದ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಇದೀಗ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ರಾಗಾ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ (Gujarat High Court) ವಜಾ ಮಾಡಿದೆ.
ಸುದೀರ್ಘ ವಿಚಾರಣೆ ನಡೆಸಿದ್ದ ಗುಜರಾತ್ ಹೈಕೋರ್ಟ್ ಶುಕ್ರವಾರ ತನ್ನ ಆದೇಶ ಪ್ರಕಟಿಸಿದೆ. ಸೂರತ್ ನ್ಯಾಯಾಲಯ ನೀಡಿದ ಆದೇಶ ಸರಿಯಾಗಿದೆ ಮತ್ತು ಕಾನೂನುಬದ್ಧವಾಗಿದೆ ಎನ್ನುವ ಮೂಲಕ ಕೆಳ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಶಿಕ್ಷೆಯ ತಡೆ ನಿರಾಕರಿಸುವುದರಿಂದ ರಾಹುಲ್ ಗಾಂಧಿ ಅವರಿಗೆ ಅನ್ಯಾಯವಾಗುವುದಿಲ್ಲ, ಶಿಕ್ಷೆಯನ್ನು ತಡೆಹಿಡಿಯಲು ಯಾವುದೇ ಸಮಂಜಸವಾದ ಕಾರಣವಿಲ್ಲ. ವಿಧಿಸಲಾದ ಆದೇಶವು ಸರಿ ಮತ್ತು ಕಾನೂನುಬದ್ಧವಾಗಿದೆ. ಅನರ್ಹತೆಯು ಕೇವಲ ಸಂಸದರು ಮತ್ತು ಶಾಸಕರಿಗೆ ಸೀಮಿತವಾಗಿಲ್ಲ. ಇದಲ್ಲದೆ ಅರ್ಜಿದಾರರ ವಿರುದ್ಧ ಹತ್ತು ಪ್ರಕರಣಗಳು ಬಾಕಿ ಉಳಿದಿವೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ 250 ರೂ. ತಲುಪಿದ ಟೊಮೆಟೋ ದರ- ಗ್ರಾಹಕರು ಕಂಗಾಲು
ರಾಹುಲ್ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಅಥವಾ ಸಂಸದರಾಗಿ ತಮ್ಮ ಸ್ಥಾನಮಾನವನ್ನು ಅಮಾನತುಗೊಳಿಸಿರುವುದನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ ಎಂದು ಆದೇಶ ನೀಡುವ ವೇಳೆ ನ್ಯಾಯಾಲಯ ಹೇಳಿದೆ.
ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ? ಎನ್ನುವ ಹೇಳಿಕೆ ವಿರುದ್ಧ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹೆಚ್‌ಹೆಚ್ ವರ್ಮಾ, ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಮಾರ್ಚ್ 23 ರಂದು ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದರು. ಇದನ್ನೂ ಓದಿ: Karnataka Budget 2023: ಬೆಂಗಳೂರಿಗೆ ಸಿಂಹಪಾಲು ಸಾಧ್ಯತೆ- ಗರಿಗೆದರಿದ ಹಲವು ನಿರೀಕ್ಷೆಗಳು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]