ಚಾಮರಾಜನಗರ: ಸಹೋದರ ಸಂಬಂಧಿಯಾದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಹಾಗೂ ಬಲವಂತದ ದೈಹಿಕ ಸಂಪರ್ಕ ನಡೆಸಿದ್ದ ಯುವಕನಿಗೆ 20 ವರ್ಷ ಶಿಕ್ಷೆ ವಿಧಿಸಿ ಚಾಮರಾಜನಗರದ (Chamarajanagar) ಮಕ್ಕಳ ಸ್ನೇಹಿ ನ್ಯಾಯಾಲಯ (Court) ತೀರ್ಪು ನೀಡಿದೆ.
ಚಾಮರಾಜನಗರ ತಾಲೂಕಿನ ಗ್ರಾಮವೊಂದರ ಯುವಕ ರಂಗಸ್ವಾಮಿ (21) ಶಿಕ್ಷೆಗೊಳಗಾದ ಅಪರಾಧಿ. ದೊಡ್ಡಪ್ಪನ ಮಗಳಾದ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಈತ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ, ಬಲವಂತದಿಂದ ದೈಹಿಕ ಸಂಪರ್ಕ ನಡೆಸಿದ್ದನು. ಇದನ್ನೂ ಓದಿ: ವಿದೇಶಿ ಮಹಿಳೆಯರಿಂದ ಪಿಎಸ್ಐ ಸೇರಿ ನಾಲ್ವರ ಮೇಲೆ ಹಲ್ಲೆ
ಈ ಸಂಬಂಧ 2020 ರಲ್ಲಿ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಚಾರ್ಚ್ಶೀಟ್ ಸಲ್ಲಿಕೆಯಾಗಿತ್ತು. ಯುವಕ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ನಿಶಾರಾಣಿ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ 40 ಸಾವಿರ ರೂ. ದಂಡ ವಿಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರವು 4 ಲಕ್ಷ ಪರಿಹಾರ ಕೊಡಬೇಕೆಂದು ನ್ಯಾಯಾಧೀಶರು ನಿರ್ದೇಶನ ಕೊಟ್ಟಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ.ಯೋಗೇಶ್ ವಾದ ಮಂಡಿಸಿದ್ದರು. ಇದನ್ನೂ ಓದಿ: ಬೀದರ್ ಪೊಲೀಸರ ದಾಳಿ – 50 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಅರೆಸ್ಟ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]