ಚಿಕ್ಕೋಡಿಯ ಜೈನಮುನಿ ಹತ್ಯೆ ಖಂಡನೀಯ – ಸಮಗ್ರ ತನಿಖೆ ಆಗಲಿ: ಕಟೀಲ್ ಒತ್ತಾಯ

Public TV
1 Min Read
nalin kumar kateel

ಬೆಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿಯ (Chikkodi) ಜೈನ ಮುನಿ (Jain Muni) ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆಯನ್ನು ನಳಿನ್ ಕುಮಾರ್ ಕಟೀಲ್ ಹೊರಡಿಸಿದ್ದು, ಈ ಹತ್ಯೆಯ ಸಮಗ್ರ ತನಿಖೆ ನಡೆಸಬೇಕು. ಕೊಲೆಗಡುಕರನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

jain muni chikkodi 2

ಮುನಿಗಳ ಹತ್ಯೆ ಮನಸ್ಸಿಗೆ ಅತ್ಯಂತ ಅಘಾತ ತಂದಿದೆ ಎಂದು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡಿನ ಸಾಧು ಸಂತರಿಗೆ ರಕ್ಷಣೆ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

ಸಾಧು, ಸಂತರು ಶಾಂತಿಪ್ರಿಯರು. ದೇಶದ ಒಳಿತು, ಸಂಸ್ಕಾರ, ಸನಾತನ ಧರ್ಮದ ವಿಚಾರವಾಗಿ ಮಾರ್ಗದರ್ಶನ ನೀಡುವವರು. ಅಂತಹ ಸಂತರನ್ನು ಹೇಯವಾಗಿ ಕೊಲೆ ಮಾಡಿರುವುದನ್ನು ಸಮಾಜ ಒಪ್ಪಲು ಸಾಧ್ಯವೇ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕೊಲೆಗಡುಕರಿಗೆ ಶಿಕ್ಷೆ; ಸರ್ಕಾರ ಲಿಖಿತ ಭರವಸೆ ಕೊಡೋವರೆಗೆ ಅನ್ನಾಹಾರ ತ್ಯಾಗ – ಜೈನಮುನಿ ಗುಣಧರ ನಂದಿ ಮಹಾರಾಜ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article