ತೆರಿಗೆ ಇಳಿಸಿ ಇಲ್ಲಾಂದ್ರೆ ಬೆಳಗ್ಗೆ ನೈಂಟಿ, ಸಂಜೆ ನೈಂಟಿ ಎಣ್ಣೆ ಕೊಡಿ: ಕೂಲಿ ಕಾರ್ಮಿಕರಿಂದ ಪ್ರತಿಭಟನೆ

Public TV
1 Min Read
Udupi Protest 2

ಉಡುಪಿ: ಸರ್ಕಾರ ಮದ್ಯದ (Liquor) ಮೇಲಿನ ತೆರಿಗೆ (Tax) ಇಳಿಕೆ ಮಾಡಿ ಇಲ್ಲವೇ, ಬೆಳಗ್ಗೆ ನೈಂಟಿ, ಸಂಜೆ ನೈಂಟಿ ಎಣ್ಣೆ ಉಚಿತವಾಗಿ ಕೊಡಿ ಎಂದು ಆಗ್ರಹಿಸಿ ಉಡುಪಿಯಲ್ಲಿ ಕೂಲಿ ಕಾರ್ಮಿಕರು ಪ್ರತಿಭಟನೆ (Protest) ನಡೆಸಿದ್ದಾರೆ.

ಉಡುಪಿ ಜಿಲ್ಲಾ ನಾಗರಿಕ ಸಮಿತಿ, ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ಇಲ್ಲಿನ ಚಿತ್ತರಂಜನ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರು ವಿನೂತನ ರೀತಿಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು. ಪ್ರತಿಭಟನೆಗೂ ಮುನ್ನ ಕುಡುಕರಿಗೆ ಹಾರ ಹಾಕಿ ಸನ್ಮಾನಿಸಿ, ಆರತಿಯೊಂದಿಗೆ ಗೌರವಿಸಲಾಯಿತು. ಇದನ್ನೂ ಓದಿ: 5 ಗ್ಯಾರಂಟಿ ಜಾರಿಗೆ ತೆರಿಗೆ ಏರಿಕೆ, 85ಸಾವಿರ ಕೋಟಿ ಸಾಲಕ್ಕೆ ನಿರ್ಧಾರ – ಯಾವ ತೆರಿಗೆ ಎಷ್ಟು ಏರಿಕೆ?

Udupi Protest

ರಾಜ್ಯ ಸರ್ಕಾರ ಇತ್ತೀಚಿನ ಬಜೆಟ್‌ನಲ್ಲಿ (Karnataka Budget) ಮದ್ಯದ ಬೆಲೆ 20% ಏರಿಕೆ ಮಾಡಿದೆ. ಸರ್ಕಾರದ ಉಚಿತ ಯೋಜನೆಗಳಿಗೆ ನಮ್ಮಿಂದಲೇ ಹಣ ಬರುತ್ತದೆ. ನಮಗೆ ಮಧ್ಯದ ಬೆಲೆ ಇಳಿಕೆ ಮಾಡಿ ಇಲ್ಲವೇ ಬೆಳಗ್ಗೆ ನೈಂಟಿ, ಸಂಜೆ ನೈಂಟಿ ಉಚಿತವಾಗಿ ಕೊಡಿ. ಅದೂ ಆಗಲಿಲ್ಲ ಅಂದ್ರೆ ಎಣ್ಣೆಯನ್ನೇ ಬಂದ್ ಮಾಡಿ ಎಂದು ಆಗ್ರಹಿಸಿದ್ದಾರೆ.

ಎಣ್ಣೆ ಬಂದ್ ಮಾಡಿದ್ರೆ, ಆ ಹಣವನ್ನ ನಮ್ಮ ಹೆಂಡತಿ, ಮಕ್ಕಳಿಗೆ ಕೊಡುತ್ತೇವೆ. ನಮ್ಮ ಹೆಂಡತಿ, ಮಕ್ಕಳನ್ನು ನಾವೇ ಹಣ ಕೊಟ್ಟು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತೆವೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ರಾಜ್ಯದಲ್ಲಿ ಡಿಸಿ, ಸಿಇಓ, ಕಮಿಷನರ್‌ಗಳಿಗೆ ರೇಟ್ ಫಿಕ್ಸ್ ಆಗಿದೆ: ಕಟೀಲ್ ಗಂಭೀರ ಆರೋಪ

5 ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಅಬಕಾರಿ ಸುಂಕವನ್ನ ಭಾರೀ ಏರಿಕೆ ಮಾಡಿದೆ. ಹಾಲಿ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‌ಗಳ ಮೇಲೆ ಹೆಚ್ಚುವರಿ 20% ಅಬಕಾರಿ ಸುಂಕ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದಿರುವ ಮಧ್ಯಪ್ರಿಯರು ಅಲ್ಲಲ್ಲಿ ಪ್ರತಿಭಟನೆಗೆ ಇಳಿದಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article