ಬೆಂಗಳೂರು: ವಿಧಾನ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವ ವಿಜಯಪುರದ (Vijayapura) ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಕಾಂಗ್ರೆಸ್ ಸರ್ಕಾರದ ಯಾವ ರಾಜಕಾರಣಿ ಅಥವಾ ಮಂತ್ರಿಗಳ ಜೊತೆಯೂ ನಮ್ಮ ಅಡ್ಜಸ್ಟ್‌ಮೆಂಟ್ ರಾಜಕೀಯ ಇಲ್ಲ ಎಂದು ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾವು ಎಲ್ಲಾ ಬಿಜೆಪಿ ಶಾಸಕರು ಸದನದಲ್ಲಿ ಸಮರ್ಥವಾಗಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಹಾಗೂ ಸರ್ಕಾರದ ವೈಫಲ್ಯದ ಕುರಿತು ನಮ್ಮ ಎಲ್ಲಾ ಶಾಸಕ ಮಿತ್ರರು ಸಮರ್ಥವಾಗಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ ಎಂದು ತಿಳಿಸಿದ್ದಾರೆ.
ಕಾರ್ಯಕರ್ತ ಹಾಗು ನಾಡಿನ ಮತದಾರರೇ.
1. ನಾವು ಎಲ್ಲಾ ಬಿಜೆಪಿ ಶಾಸಕರು ಸದನದಲ್ಲಿ ಸಮರ್ಥವಾಗಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸುತ್ತಿದ್ದೇವೆ.
2. ಕಾಂಗ್ರೆಸ್ ಸರ್ಕಾರದ ಯಾವ ರಾಜಕಾರಣಿ ಅಥವಾ ಮಂತ್ರಿಗಳ ಜೊತೆಯೂ ನಮ್ಮ "Adjustment" ರಾಜಕೀಯ ಇಲ್ಲ.
3. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಹಾಗು ಸರ್ಕಾರದ ವೈಫಲ್ಯದ ಕುರಿತು ನಮ್ಮ ಎಲ್ಲಾ…
— Basanagouda R Patil (Yatnal) (@BasanagoudaBJP) July 12, 2023
ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಹಾಗೂ ಆಯವ್ಯಯದ ಕುರಿತು ಚರ್ಚೆಗಳು ಬಾಕಿ ಇದೆ ಎಂದು ಯತ್ನಾಳ್ ಅಚ್ಚರಿಯ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಹೆಸರು ಲಕ್ಷ್ಮೀ, ಲಿಂಗ ಪುರುಷ ಅಂತ ಇರೋದನ್ನ ಕಂಡು ಕಕ್ಕಾಬಿಕ್ಕಿಯಾದ ಕಂಡಕ್ಟರ್
ಮಂಗಳವಾರ ವಿಜಯಪುರ ಪಾಲಿಕೆಗೆ ಹೊಸ ಆಯುಕ್ತರ ವರ್ಗಾವಣೆ ವಿಚಾರ ಪ್ರಸ್ತಾಪಿಸಿ ಯತ್ನಾಳ್ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದರು. ವಿಜಯಪುರ ಪಾಲಿಕೆಗೆ ಅರ್ಹತೆಯಿಲ್ಲದ, ಐಎಎಸ್, ಕೆಎಎಸ್ ಕೇಡರ್ ಅಲ್ಲದ ಅಧಿಕಾರಿಯನ್ನು ವರ್ಗಾಯಿಸಲಾಗಿದೆ. ಆ ಅಧಿಕಾರಿ ಸೌಜನ್ಯಕ್ಕೂ ನನ್ನ ಬಂದು ಮಾತಾಡಿಸಿಲ್ಲ. ಈ ವರ್ಗಾವಣೆ ಮೂಲಕ ಸಚಿವರು ವ್ಯಾಪಾರ ಮಾಡಿರಬಹುದು ಎಂದು ಗಂಭೀರ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಸಚಿವ ಬೈರತಿ ಸುರೇಶ್ ಹಾಗೂ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ ಸಹ ಸಹ ಸಿಟ್ಟಿಗೆದ್ದು ಯತ್ನಾಳ್ ಹೇಳಿಕೆ ಖಂಡಿಸಿದ್ದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]