ಶಂಕರ್ ಜೊತೆಗಿನ ಸಿನಿಮಾ ನಂತರ ಸಕ್ರಿಯ ರಾಜಕಾರಣಕ್ಕೆ ವಿಜಯ್

Public TV
2 Min Read
dalapathi vijay 5

ಮಿಳಿನ ಸ್ಟಾರ್ ನಟ ದಳಪತಿ ವಿಜಯ್ ರಾಜಕೀಯಕ್ಕೆ ಬರುವುದು ಪಕ್ಕಾ ಎನ್ನುತ್ತಿದ್ದರೂ, ಶಂಕರ್ (Shankar)  ಜೊತೆಗಿನ ಸಿನಿಮಾ ಮುಗಿಸಿಕೊಂಡು ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಲಿದ್ದಾರಂತೆ. ಸದ್ಯ ಲಿಯೋ ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಅದರ ಜೊತೆ ಜೊತೆಗೆ ರಾಜಕಾರಣದ ಕಣವನ್ನು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವುದು ಅವರು ಆಪ್ತ ಬಳಗದ ಮಾಹಿತಿ.

dalapathi vijay 4

ವಿಜಯ್ ರಾಜಕಾರಣಕ್ಕೆ ಬರುವುದು ಪಕ್ಕಾ ಆಗಿರುವುದರಿಂದ ಅಭಿಮಾನಿಗಳು ಮತ್ತು ಆಪ್ತರ ಜೊತೆ ವಿಜಯ್ ನಿರಂತರ ಮೀಟಿಂಗ್ ಮಾಡುತ್ತಿದ್ದಾರೆ ಎನ್ನುವುದು ಸಿಕ್ಕಿರುವ ವರ್ತಮಾನ. ಈ ನಡುವೆ ವಿಜಯ್ ರಾಜಕಾರಣಕ್ಕೆ ಬಂದರೆ, ಅವರನ್ನು ಬೆಂಬಲಿಸುವುದಾಗಿ ಅಜಿತ್ ಫ್ಯಾನ್ಸ್ ಹೇಳಿಕೊಂಡಿದ್ದಾರೆ. ಹಾಗಾಗಿ ವಿಜಯ್ ಎಂಟ್ರಿ ಬಹುತೇಕ ಖಚಿತ ಎಂದೇ ಹೇಳಲಾಗುತ್ತಿದೆ.

dalapathi vijay 3

ತಮಿಳುನಾಡಿನ (Tamil Nadu) ರಾಜಕಾರಣದಲ್ಲಿ ಬಿರುಗಾಳಿ, ಸುನಾಮಿ ಏಕಕಾಲಕ್ಕೆ ಎದ್ದು ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿವೆ. ಒಂದು ಕಡೆ ಬಿಜೆಪಿಯು ಮಾಜಿ ಐಪಿಎಸ್ ಆಫೀಸರ್ ಅಣ್ಣಾಮಲೈ ನೇತೃತ್ವದಲ್ಲಿ ಈಗಿನಿಂದಲೇ ಚುನಾವಣೆಗೆ ಸಿದ್ಧತೆ ನಡೆಸಿದ್ದರೆ, ಮತ್ತೊಂದು ಕಡೆ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ನಟ ದಳಪತಿ ವಿಜಯ್ (Dalpati Vijay) ಕೂಡ ಈ ಬಾರಿ ಚುನಾವಣೆ ಅಖಾಡಕ್ಕೆ ಇಳಿಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಚುನಾವಣೆಯನ್ನೇ ಗುರಿಯಾಗಿರಿಸಿಕೊಂಡು ವಿಜಯ್, ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

dalapathi vijay 2

ದಳಪತಿ ವಿಜಯ್ ರಾಜಕಾರಣಕ್ಕೆ (Politics) ಬರುತ್ತಾರೆ ಎನ್ನುವ ಸುದ್ದಿ ಹೊಸದೇನೂ ಅಲ್ಲ. ಈಗಾಗಲೇ ಹಲವಾರು ಬಾರಿ ಅವರ ಹೆಸರು ತೇಲಿ ಬಂದಿದೆ. ವಿಜಯ್ ಅವರ ತಂದೆ ರಾಜಕಾರಣಿಯೂ ಆಗಿರುವುದರಿಂದ ಪದೇ ಪದೇ ವಿಜಯ್ ಹೆಸರು ಚುನಾವಣಾ ಕಣದಲ್ಲಿ ಕೇಳಿ ಬಂದಿದೆ. ಪ್ರತಿ ಸಲವೂ ಅದು ಠುಸ್ ಪಟಾಕಿ ಆಗಿದೆ. ಆದರೆ, ಈ ಬಾರಿ ಅವರು ಕಣಕ್ಕೆ ಇಳಿಯೋದು ಗ್ಯಾರಂಟಿ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಕೊನೆಗೂ ಮದುವೆ ಬಗ್ಗೆ ಸಿಕ್ರೇಟ್ ಬಿಟ್ಟುಕೊಟ್ಟ ವಿಜಯ್ ದೇವರಕೊಂಡ

dalapathi vijay 1

ಸೋಷಿಯಲ್ ಮೀಡಿಯಾಗಳಿಂದ ದೂರವಿದ್ದ ವಿಜಯ್, ಇದೀಗ ಎಲ್ಲ ಸೋಷಿಯಲ್ ಮೀಡಿಯಾ ವೇದಿಕೆಗೆ ಬಂದಿದ್ದಾರೆ. ನಿರಂತರವಾಗಿ ಅಭಿಮಾನಿಗಳ ಜೊತೆ ಸಂವಹನ ಮಾಡುತ್ತಿದ್ದಾರೆ. ಅಲ್ಲದೇ, ಮೊನ್ನೆಯಷ್ಟೇ ತಮಿಳುನಾಡಿನಾದ್ಯಂತ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಟಾಪ್ ಬಂದ ಮಕ್ಕಳಿಗೆ ಬಹುಮಾನ ನೀಡಿದ್ದಾರೆ. ಅದು ತಾಲ್ಲೂಕು  ಮತ್ತು ಜಿಲ್ಲಾ ಮಟ್ಟದಲ್ಲಿ ಪರಿಗಣನೇ ತೆಗೆದುಕೊಳ್ಳದೇ ಮತಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ಬಹುಮಾನ ನೀಡಿದ್ದಾರೆ.

 

ವಿಜಯ್ ಮಕ್ಕಳ್ ಇಯಕ್ಕಮ್ (Vijay Makkal Iyakkam) ಎನ್ನುವ ಸಂಸ್ಥೆಯ ಮೂಲಕ ವಿಜಯ್ ಈ ಕೆಲಸಗಳನ್ನು ಮಾಡುತ್ತಿದ್ದಾರೆ. ಒಟ್ಟು 235 ವಿಧಾನಸಭಾ ಕ್ಷೇತ್ರಗಳ ಮಕ್ಕಳಿಗೆ ಬಹುಮಾನ ನೀಡಿದ್ದು, ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಮಕ್ಕಳಿಗೆ ನಗದು ಬಹುಮಾನ ಮತ್ತು ಸನ್ಮಾನವನ್ನು ಹಮ್ಮಿಕೊಂಡಿದ್ದರು. ಹೀಗಾಗಿ ಈ ಬಾರಿ ಅಷ್ಟೂ ಕ್ಷೇತ್ರಗಳಲ್ಲೂ ವಿಜಯ್ ಅವರ ಪಕ್ಷ ಸ್ಪರ್ಧಿಸಲಿದೆ ಎಂದು ಹೇಳಲಾಗುತ್ತಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article