ಹಾಸನ: ಯುವಕನೊಬ್ಬ ಚಿರತೆಯನ್ನೇ (Leopard) ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆಯೊಂದು ಹಾಸನದಲ್ಲಿ (Hassan) ನಡೆದಿದೆ.
ವೇಣುಗೋಪಾಲ್ ಅಲಿಯಾಸ್ ಮುತ್ತು ಚಿರತೆ ಹಿಡಿದ ಯುವಕ. ಈತ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿ ಬಾಗಿವಾಳು ಗ್ರಾಮದಲ್ಲಿ ಚಿರತೆ ಸೆರೆ ಹಿಡಿದು ತನ್ನ ಬೈಕ್‍ನಲ್ಲಿ ಕಟ್ಟಿಕೊಂಡು ಓಡಾಡಿದ್ದಾನೆ.
ಮುತ್ತು ಎಂದಿನಂತೆ ಬೆಳಗ್ಗೆ ತಮ್ಮ ಜಮೀನಿಗೆ ಹೋಗಿದ್ದ ವೇಳೆ ಚಿರತೆ ಕಾಣಿಸಿಕೊಂಡಿದೆ. ಈ ವೇಳೆ ಆತ ಹರಸಾಹಸಪಟ್ಟು ಚಿರತೆ ಸೆರೆ ಹಿಡಿದಿದ್ದಾನೆ. ಬಳಿಕ ಬೈಕ್ ನಲ್ಲಿ ಕಟ್ಟಿಕೊಂಡು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾನೆ. ಎರೆ ಹಿಡಿದ ವೇಳೆ ಮುತ್ತು ಕೈಗೆ ತರಚಿದ ಗಾಯಗಳಾಗಿವೆ. ಇದನ್ನೂ ಓದಿ: ಮೂರೇ ದಿನದ ಅಂತರದಲ್ಲಿ ಮತ್ತೊಂದು ಚೀತಾ ಸಾವು – 4 ತಿಂಗಳಲ್ಲಿ 8ನೇ ಘಟನೆ
ಸದ್ಯ ಚಿರತೆಗೆ ಗಂಡಸಿ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಡಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ:ಚಲಿಸುತ್ತಿದ್ದ ಕಾರಿನಲ್ಲೇ ಪತಿಯೊಂದಿಗೆ ಜಗಳವಾಡುತ್ತಾ ಸ್ಟೇರಿಂಗ್ ಎಳೆದ ಪತ್ನಿ!
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]