2025ರ ವೇಳೆಗೆ ತಲೆ ಎತ್ತಲಿವೆ ಇನ್ನೂ 18 ಮೆಟ್ರೋ ಸ್ಟೇಷನ್ಸ್‌ – ಸುರಂಗ ಮಾರ್ಗ ಕೊರೆಯುವ ಸ್ಥಳಕ್ಕೆ ಡಿಸಿಎಂ ಡಿಕೆಶಿ ಭೇಟಿ

Public TV
2 Min Read
DK Shivakumar 5

ಬೆಂಗಳೂರು: ಇಲ್ಲಿನ ಮೆಟ್ರೋ ಸುರಂಗ ಮಾರ್ಗದ (Metro Tunnel Line) ಕಾಮಗಾರಿ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಲಕ್ಕಸಂದ್ರ ಸುರಂಗ ಮಾರ್ಗ ಹಾಗೂ ಮಹಾತ್ಮ ಗಾಂಧಿ ರಸ್ತೆಯ (MG Road) ಸುರಂಗ ಮಾರ್ಗದ ಬಳಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ತೆರಳಿ ಪರಿಶೀಲನೆ ನಡೆಸಿದರು. ಕಾಮಕಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದನ್ನೂ ಓದಿ: ಚಂದ್ರನ ಅನ್ವೇಷಣೆಯಲ್ಲಿ ಇಸ್ರೋ ಮತ್ತೊಂದು ಮೈಲುಗಲ್ಲು: ಸಚಿವ ಭೋಸರಾಜು ಸಂತಸ

ಲಕ್ಕಸಂದ್ರ ಮೆಟ್ರೋ ಸುರಂಗ ಮಾರ್ಗ ಕಾಮಗಾರಿ (Metro Tunnel Line Work) ಪರಿಶೀಲನೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೆಟ್ರೋ ಸುರಂಗ ಕಾಮಗಾರಿ ಉತ್ತಮವಾಗಿ ಸಾಗುತ್ತಿದೆ. ಅಧಿಕಾರಿಗಳು ಎಷ್ಟೇ ಹೇಳಿದರೂ ಕಾಮಗಾರಿಯ ಪ್ರಗತಿಯನ್ನ ನಾನು ಕಣ್ಣಾರೆ ನೋಡ್ಬೇಕು ಅಂತಾ ಇಲ್ಲಿಗೆ ಭೇಟಿ ನೀಡಿದ್ದೇನೆ ಎಂದರು.

ಅಧಿಕಾರಿಗಳ ಮಾಹಿತಿ ಪ್ರಕಾರ, 20.9 ಕಿಮೀ ಸುರಂಗ ಮಾರ್ಗ ಆಗಿದೆ. ಒಟ್ಟು 18 ನಿಲ್ದಾಣಗಳನ್ನ ಮಾಡಲಾಗುತ್ತಿದೆ. 4 ಪ್ಯಾಕೆಜ್ ನಲ್ಲಿ ಈ ಯೋಜನೆ ತೆಗೆದುಕೊಳ್ಳಲಾಗಿದೆ. ಕೆಲವೆಡೆ ಕಾಮಗಾರಿ ಪೂರ್ಣಗೊಂಡಿದ್ದರೆ, ಮತ್ತೆ ಕೆಲವು ಕಡೆಗಳಲ್ಲಿ 70%, 80% ಪೂರ್ಣವಾಗಿದೆ. 2025ರ ಮಾರ್ಚ್ ವೇಳೆಗೆ ಈ ಮೆಟ್ರೋ ಕಾಮಗಾರಿ ಪೂರ್ಣವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳು, ಗುತ್ತಿಗೆದಾರರು, ಸರ್ಕಾರ ಎಲ್ಲರ ಸಹಕಾರ ಬೇಕು ಎಂದು ಹೇಳಿದರು. ಇದನ್ನೂ ಓದಿ: ಸಂಘಪರಿವಾರದ ಟ್ರಸ್ಟ್‌ಗೆ ಮಂಜೂರಾಗಿದ್ದ ಭೂಮಿ ವಾಪಸ್‌- ಸರ್ಕಾರದ ವಿರುದ್ಧ ಬೊಮ್ಮಾಯಿ ಕಿಡಿ

ಬ್ರ್ಯಾಂಡ್ ಬೆಂಗಳೂರು ನಿರ್ಮಾಣಕ್ಕಾಗಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಿ ಕಾಮಗಾರಿ ತೀವ್ರಗತಿಯಲ್ಲಿ ಸಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿಗಾಗಿ ಬಹಳ ದೊಡ್ಡ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಸುರಂಗ ರಸ್ತೆ ನಿರ್ಮಾಣದ ಸಾಧಕ ಬಾಧಕಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದೇವೆ. ಬೇರೆ ರಾಜ್ಯಗಳಲ್ಲಿ ಹೇಗೆ ಮಾಡಲಾಗುತ್ತಿದೆ ಎಂಬುದನ್ನು ನೋಡುತ್ತಿದ್ದೇವೆ. ಈ ವಿಚಾರವಾಗಿ ಸದ್ಯದಲ್ಲೇ ಮಾಹಿತಿ ನೀಡುತ್ತೇನೆ. ಈ ಕಾಮಗಾರಿಗಳು ತಾಂತ್ರಿಕವಾಗಿ ನಡೆಯುತ್ತವೆ. ಇವು ಬಹಳ ಸುರಕ್ಷಿತವಾಗಿ ಮಾಡಬೇಕಾದ ಕೆಲಸ. ಹೀಗಾಗಿ ಅದಕ್ಕೆ ಸಮಯ ತೆಗೆದುಕೊಳ್ಳುತ್ತದೆ. ಯಾರು ಟೀಕೆ ಮಾಡುತ್ತಾರೆ ಎಂಬುದು ಮುಖ್ಯ ಅಲ್ಲ ಎಂದಿದ್ದಾರೆ

Web Stories

Share This Article