ದೆಹಲಿಯ ಕಟ್ಟಡವೊಂದರ 9ನೇ ಮಹಡಿ ಬೆಂಕಿಗಾಹುತಿ – ತಪ್ಪಿದ ದುರಂತ, ವರದಾನವಾಯ್ತು ವರುಣ

Public TV
1 Min Read
DCM Building 1

ನವದೆಹಲಿ: ಇಲ್ಲಿನ ಬರಾಖಂಬಾ ರಸ್ತೆಯಲ್ಲಿರುವ ಡಿಸಿಎಂ ಕಟ್ಟಡದ (DCM Building) 9ನೇ ಮಹಡಿಯಲ್ಲಿ ಶನಿವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಅನೇಕ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸೂಕ್ತ ಸಮಯಕ್ಕೆ ಮಳೆಯೂ ಅಪ್ಪಳಿಸಿದ್ದರಿಂದ ಹಾನಿ ಪ್ರಮಾಣ ಕಡಿಮೆಯಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಸಂಜೆ 6:21ರ ಸುಮಾರಿಗೆ ಕಟ್ಟಡಕ್ಕೆ ಬೆಂಕಿ ಬಿದ್ದಿರುವ ಕುರಿತು ಕರೆ ಬಂದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 10 ಅಗ್ನಿಶಾಮಕ ವಾಹನಗಳು (Fire Engines) ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಈವರೆಗೆ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಇದನ್ನೂ ಓದಿ: ದೆಹಲಿ ಪ್ರವಾಹಕ್ಕೆ ಬಿಜೆಪಿಯೇ ಕಾರಣ – AAP ಆರೋಪ

DCM Building

ಕನ್ನಾಟ್ ಸ್ಥಳಕ್ಕೆ ಸಮೀಪದಲ್ಲಿರುವ ಬಾರಾಖಂಬಾ ರಸ್ತೆಯಲ್ಲಿರುವ ಡಿಸಿಎಂ ಕಟ್ಟಡದ 9ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಧಗಧಗಿಸುತ್ತಿರುವುದನ್ನು ಕಂಡ ಕಟ್ಟಡದ ಮಾಲೀಕರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಗಿಳಿಯುತ್ತಿದ್ದಂತೆ ಮಳೆಯೂ ಸಹ ಅಪ್ಪಳಿಸಿದ್ದು, ಕಾರ್ಯಾಚರಣೆಗೆ ನೆರವಾಗಿದೆ.

ಈ ಕುರಿತ ವೀಡಿಯೋ ಹಾಗೂ ಚಿತ್ರಗಳು ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಮದುವೆಯಾದ 2 ಗಂಟೆಯಲ್ಲೇ ಪತ್ನಿಗೆ ತಲಾಖ್ ನೀಡಿದ ಪತಿ

Web Stories

Share This Article