ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪ- ಹಲ್ಲೆಗೈದ ನಾಲ್ವರು ಅರೆಸ್ಟ್

Public TV
1 Min Read
ARREST 2 1

ರಾಯಚೂರು: ಇನ್ಸ್ಟಾಗ್ರಾಂ ಪೋಸ್ಟ್‌ (Social Media) ವಿಚಾರಕ್ಕೆ ಹಿಂದೂ ಯುವಕರ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ಮಾಡಿರುವ ಘಟನೆ ಸಿಂಧನೂರಿನ (Sindhanur) ಆರ್‌ಹೆಚ್ ಕ್ಯಾಂಪ್2 ರಲ್ಲಿ ನಡೆದಿದೆ.

ಈ ಸಂಬಂಧ ನಾಲ್ಕು ಜನ ಯುವಕರನ್ನು ಪೊಲೀಸರು (Police) ಬಂಧಿಸಿದ್ದಾರೆ. ಅಲ್ಲದೇ 30 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತರನ್ನು ಅಕ್ಬರ್, ಶಾಮೀದ್, ತಾಜುದ್ದೀನ್ ಮತ್ತು ಸಮೀರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಯುವಕನ ಹಲ್ಲೆಗೈದು ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ- ಆರೋಪಿಗಳ ಬಂಧನ

ಯುವತಿಯ ಹೆಸರಿನಲ್ಲಿ ಫೇಕ್ ಅಕೌಂಟ್ ಮೂಲಕ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದೇ ವಿಚಾರಕ್ಕೆ ಬಂಧಿತರು ಸಾಮಾಜಿಕ ಜಾಲತಾಣದ ಗ್ರೂಪ್‍ನಲ್ಲಿದ್ದ ಯುವಕರನ್ನ ವಿಚಾರಿಸಲು ತೆರಳಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಗರದ ದುರ್ಗಾದೇವಿ ದೇವಾಲಯದ ಮುಂದೆ ಗಲಾಟೆ ನಡೆದಿದೆ ಎನ್ನಲಾಗಿದೆ.

ಪೋಸ್ಟ್ ಮಾಡಿದವರು ಯಾರು ಎನ್ನುವುದು ಗೊತ್ತಿದ್ದರೂ ಹೇಳುತ್ತಿಲ್ಲ ಎಂದು ಬಂಧಿತರು ವಾದಿಸಿದ್ದಾರೆ. ಬಳಿಕ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ .ಬಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ – ಪ್ರಯಾಣಿಕರು ಸೇಫ್

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article