ಬಾಲಿವುಡ್‌ನಲ್ಲಿ (Bollywood) ಹೊಸ ಅಲೆ ಸೃಷ್ಟಿಸಿದ ಸಿನಿಮಾ ಅಂದರೆ ಅದು ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಸಿನಿಮಾ. 2022ರಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ವಿವೇಕ್ ಅಗ್ನಿಹೋತ್ರಿ ನಿರ್ದೇಶದ ಸಿನಿಮಾ ಸೌಂಡ್ ಮಾಡಿತ್ತು. ಈ ಚಿತ್ರದ ನಿರ್ದೇಶಕ ಫ್ಯಾನ್ಸ್ ಮತ್ತೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಬಾರಿ ಅವರು ಮತ್ತೊಂದು ‘ದಿ ಕಾಶ್ಮೀರ್ ಫೈಲ್ಸ್’ ಜೊತೆ ಬರೋದಾಗಿ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಇನ್ನೂ ಎಲ್ಲೂ ಹೇಳಿರದ ಸಾಕಷ್ಟು ವಿಚಾರಗಳನ್ನ ಒಟಿಟಿ ಮೂಲಕ ತೋರಿಸಲು ನಿರ್ದೇಶಕರು ಮುಂದಾಗಿದ್ದಾರೆ.
2022ರಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ಅನುಪಮ್ ಖೇರ್ (Anupam Kher) ಅವರು ಪ್ರಮುಖವಾಗಿ ನಟಿಸಿದ್ದರು. ಕಾಶ್ಮೀರ ಪಂಡಿತರನ್ನ ಆಧರಿಸಿ ನೈಜ ಕಥೆಯನ್ನೇ ಈ ಸಿನಿಮಾ ಮೂಲಕ ತೋರಿಸಿಲಾಗಿತ್ತು. ಅನೇಕರು ಈ ಸಿನಿಮಾವನ್ನು ಖಂಡಿಸಿದ್ದರು. ಆದರೆ ಸಾಕಷ್ಟು ಟೀಕೆ, ವಿರೋಧದ ನಡುವೆಯೂ ಸಿನಿಮಾ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು.
ವಿವೇಕ್ ಅಗ್ನಿಹೋತ್ರಿ ಅವರು ‘ದಿ ಕಾಶ್ಮೀರ್ ಫೈಲ್ಸ್ ಅನ್‌ರಿಪೋರ್ಟೆಡ್’ ಎಂಬ ಪ್ರಾಜೆಕ್ಟ್ ಈಗ ಘೋಷಣೆ ಮಾಡಿದ್ದಾರೆ. ಇದರ ಟೀಸರ್ ಕೂಡ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಅನೇಕ ಕಾಶ್ಮೀರಿ ಹಿಂದೂಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದರ ಜೊತೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ತುಣುಕುಗಳನ್ನ ಸೇರಿಸಲಾಗಿದೆ. ಈ ಬಾರಿ ಒಟಿಟಿ ಮೂಲಕ ಸಿನಿಮಾ ರಿಲೀಸ್ ಆಗಲಿದೆ. ಇದನ್ನೂ ಓದಿ:ಆಲ್ ಓಕೆ ಅಲೋಕ್ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ರವಿಚಂದ್ರನ್
ನರಮೇಧ ನಡೆದಿದೆ ಎಂದು ಒಪ್ಪದವರು, ಭಯೋತ್ಪಾದಕ ಬೆಂಬಲಿಗರು ಮತ್ತು ಭಾರತದ ಶತ್ರುಗಳು ಕಾಶ್ಮೀರ ಫೈಲ್ಸ್ನ ಪ್ರಶ್ನಿಸಿದರು. ಕಾಶ್ಮೀರ ಹಿಂದೂಗಳ ಹತ್ಯಾಕಾಂಡದ ಭೀಕರ ಸತ್ಯವನ್ನು ಈಗ ನಿಮ್ಮ ಮುಂದಿಡುತ್ತಿದ್ದೇನೆ. ಇದನ್ನು ದೆವ್ವಗಳು ಮಾತ್ರ ಪ್ರಶ್ನಿಸಬಹುದು. ಶೀಘ್ರದಲ್ಲೇ ಬರಲಿದೆ #KashmirUnreported ಎಂದು ವಿವೇಕ್ ಅಗ್ನಿಹೋತ್ರಿ ಬರೆದುಕೊಂಡಿದ್ದಾರೆ. ಕಾಶ್ಮೀರಿ ಪಂಡಿತರ ಇತಿಹಾಸದ ನಿರ್ಲಕ್ಷಿತ ಅಧ್ಯಾಯಗಳ ಮರುಶೋಧ ಎಂದು ಖಾಸಗಿ ಒಟಿಟಿವೊಂದು ಟ್ವೀಟ್ ಮಾಡಿಕೊಂಡಿದೆ.
‘ದಿ ಕಾಶ್ಮೀರ್ ಫೈಲ್ಸ್ ಅನ್‌ರಿಪೋರ್ಟೆಡ್’ (Kashmir Files Unreported) ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಬಗ್ಗೆ ಸದ್ಯ ಹೆಚ್ಚಿನ ಮಾಹಿತಿ ರಿವೀಲ್ ಆಗಿಲ್ಲ. ಹೆಚ್ಚಿನ ಅಪ್‌ಡೇಟ್‌ಗೆ ಕಾದುನೋಡಬೇಕಿದೆ. ವಿವೇಕ್ ಅಗ್ನಿಹೋತ್ರಿ ಅವರು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಕನ್ನಡದ ನಟಿ ಕಾಂತಾರ ಬೆಡಗಿ ಸಪ್ತಮಿ ಗೌಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈ ವರ್ಷದ ಅಂತ್ಯದಲ್ಲಿ ತೆರೆಗೆ ಬರಲಿದೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]