ರಾತ್ರಿ ಮನೆ ಮುಂದೆ ನಿಂತಿದ್ದ ರೌಡಿಶೀಟರ್‌ನನ್ನು ಕೊಚ್ಚಿ ಕೊಲೆಗೈದ್ರು!

Public TV
1 Min Read
SHIVAMOGGA MURDER

ಶಿವಮೊಗ್ಗ: ರೌಡಿಶೀಟರ್ ಒಬ್ಬನನ್ನು ಮನೆಯ ಮುಂದೆಯೇ ಮಾರಕಾಸ್ತ್ರಗಳಿಂದ ಹಲ್ಲೆಗೈದು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ (Bhadravathi) ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ.

ಹತ್ಯೆಯಾದ ರೌಡಿಶೀಟರ್‌ನನ್ನು ಮುಜಾಯಿದ್ದೀನ್ (32) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮನೆಯಿಂದ ಹೊರಗಡೆ ಬಂದು ಗೇಟ್ ಬಳಿ ನಿಂತಿದ್ದ ವೇಳೆ ಏಕಾಏಕಿ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಐಸಿಸ್ ಉಗ್ರರೊಂದಿಗೆ ನಂಟು- ವಿದ್ಯಾರ್ಥಿ ಅರೆಸ್ಟ್

ಭದ್ರಾವತಿಯಲ್ಲಿ ಈ ಹಿಂದೆ ನಡೆದಿದ್ದ ಹಲವು ಅಪರಾಧ ಪ್ರಕರಣದಲ್ಲಿ ಮುಜಾಯಿದ್ದೀನ್ ಭಾಗಿಯಾಗಿದ್ದ. ಈ ಹಿನ್ನೆಲೆಯಲ್ಲಿ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಹತ್ಯೆಗೈದ ಆರೋಪಿಗಳು ತಲೆ ಮರೆಸಿಕೊಂಡಿದ್ದು ಈ ಬಗ್ಗೆ ಸುಳಿವು ಸಿಕ್ಕಿಲ್ಲ.

ಈ ಸಂಬಂಧ ಘಟನಾ ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಜೈಲಲ್ಲಿದ್ದುಕೊಂಡೇ ಹಿಂದೂಗಳ ಮತಾಂತರ- ನಜೀರ್ ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಹಿರಂಗ

Web Stories

Share This Article