ಮಣಿಪುರ ಹಿಂಸಾಚಾರ ಹತೋಟಿಗೆ ತರಲು ಇಬ್ಬರು ಉನ್ನತ ಅಧಿಕಾರಿಗಳ ನಿಯೋಜನೆ

Public TV
1 Min Read
MANIPUR 1

ಇಂಫಾಲ: ಕಳೆದ ಎರಡು ತಿಂಗಳಿಂದ ಹಿಂಸಾಚಾರದಿಂದ ನಲುಗುತ್ತಿರುವ ಮಣಿಪುರವನ್ನು (Manipur) ಹತೋಟಿಗೆ ತರಲು ಇಬ್ಬರು ಡಿಐಜಿ (DIG) ರ‍್ಯಾಂಕ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಧಿಕಾರಿಗಳು 5,000 ಸಿಆರ್‌ಪಿಎಫ್ (CRPF) ಯೋಧರಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ವ್ಯಾಪಕವಾಗಿ ಹರಡುವುದನ್ನು ತಡೆಯಲು ಗೃಹ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ. ಈ ಮೊದಲು ಕೇವಲ ಆರು ಸಿಆರ್‌ಪಿಎಫ್ ಯೋಧರ ಕೇಂದ್ರವನ್ನು ತೆರೆಯಲಾಗಿತ್ತು. ಬಳಿಕ ಅದನ್ನು 57ಕ್ಕೆ ಹೆಚ್ಚಿಸಲಾಗಿದೆ. ಯೋಧರು ಕನಿಷ್ಠ ಆರು ತಿಂಗಳ ಕಾಲ ಅಲ್ಲಿಯೇ ಇರಲಿದ್ದಾರೆ. ಹೀಗಾಗಿ ಅವರಿಗೆ ಕಾರ್ಯಾಚರಣೆಯ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲು ಹಾಗೂ ಮೇಲ್ವಿಚಾರಣೆಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ಪ್ರಮುಖ ಆರೋಪಿ ಮನೆಗೆ ಬೆಂಕಿ ಹಾಕಿ ಆಕ್ರೋಶ

ನಾಗಾಲ್ಯಾಂಡ್‍ನ (Nagaland) ಕೊಹಿಮಾ ಮತ್ತು ಅಸ್ಸಾಂನ (Assam) ಸಿಲ್ಚಾರ್‌ನಿಂದ ಮಣಿಪುರಕ್ಕೆ ಇಬ್ಬರು ಡಿಐಜಿ ಶ್ರೇಣಿಯ ಅಧಿಕಾರಿಗಳನ್ನು ಕಳುಹಿಸಲಾಗಿದೆ. ಮಣಿಪುರದಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗೃಹ ಸಚಿವಾಲಯದೊಂದಿಗೆ ಚರ್ಚಿಸಿದ ನಂತರ ಇಬ್ಬರು ಹಿರಿಯ ಅಧಿಕಾರಿಗಳನ್ನು ನಿಯೋಜಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆಯರ ಬೆತ್ತಲೆಯ ಮೆರವಣಿಗೆ ವಿಚಾರವಾಗಿ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಂತರದ ಬೆಳವಣಿಗೆಯಲ್ಲಿ ಆರೋಪಿಯೊಬ್ಬನ ಮನೆಗೆ ಗ್ರಾಮಸ್ಥರು ಬೆಂಕಿ ಹಚ್ಚಿರುವುದು ವರದಿಯಾಗಿದೆ. ಕಳೆದ 2 ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ 142ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. 17 ಜನ ಕಾಣೆಯಾಗಿದ್ದಾರೆ. ಇದನ್ನೂ ಓದಿ: ಐಸಿಸ್ ಉಗ್ರರೊಂದಿಗೆ ನಂಟು- ವಿದ್ಯಾರ್ಥಿ ಅರೆಸ್ಟ್

Web Stories

Share This Article