ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಜೆಡಿಎಸ್‌-ಬಿಜೆಪಿ ಹೊಂದಾಣಿಕೆ: ಕಾಲೆಳೆದ ಕಾಂಗ್ರೆಸ್‌

Public TV
2 Min Read
bjp jds congress

ಬೆಂಗಳೂರು: ಜೆಡಿಎಸ್‌ (JDS) ಹಾಗೂ ಬಿಜೆಪಿಯ (BJP) ಹೊಂದಾಣಿಕೆಯು ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಎಂದು ಕಾಂಗ್ರೆಸ್‌ (Congress) ಟ್ವೀಟ್‌ ಮೂಲಕ ಕಾಲೆಳೆದಿದೆ.

ಕಾಂಗ್ರೆಸ್‌ ಟ್ವೀಟ್‌ನಲ್ಲೇನಿದೆ?
ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು ‘ಕುರುಡನ ಹೆಗಲ ಮೇಲೆ ಕುಂಟನ ಸವಾರಿ’ಯಂತಿದೆ! ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ. ನಾಯಕತ್ವವಿಲ್ಲದ ಬಿಜೆಪಿ, ಜೆಡಿಎಸ್‌ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ. ಇದನ್ನೂ ಓದಿ: ಪ್ರಧಾನಿ ಮೋದಿ ಕೋಪಗೊಂಡಿದ್ದರೆ, ಬಿರೇನ್ ಸಿಂಗ್ ವಜಾ ಮಾಡಬಹುದಿತ್ತು: ಖರ್ಗೆ ಟಾಂಗ್

ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ? ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ. ಥೇಟ್ ನಾಗವಲ್ಲಿಯ ತರ ಎಂದು ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ಹರಿಹಾಯ್ದಿದೆ.

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ ಒಂದಾಗಿವೆ. ವಿವಿಧ ರಾಜ್ಯಗಳ ಹಿರಿಯ ನಾಯಕರನ್ನು ಸ್ವಾಗತಿಸಲು ಐಎಎಸ್‌ ಅಧಿಕಾರಿಗಳನ್ನು ನೇಮಿಸಿದ್ದ ಸರ್ಕಾರದ ವಿರುದ್ಧ ಸದನದಲ್ಲಿ ಎರಡೂ ವಿಪಕ್ಷಗಳು ಗುಡುಗಿದ್ದವು. ಈ ವೇಳೆ ಅಶಿಸ್ತಿನ ಆರೋಪದಲ್ಲಿ ಬಿಜೆಪಿಯ 10 ಶಾಸಕರನ್ನು ಸ್ಪೀಕರ್‌ ಖಾದರ್‌ ಅಮಾನತು ಮಾಡಿದ್ದಾರೆ. ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿ ಎರಡೂ ಪಕ್ಷಗಳ ನಾಯಕರು ಒಟ್ಟಾಗಿ ಪ್ರತಿಭಟಿಸಿದ್ದರು.

ಬಿಜೆಪಿಯಿಂದ ಇದುವರೆಗೂ ವಿಪಕ್ಷ ನಾಯಕರನ್ನ ಆಯ್ಕೆ ಮಾಡಿಲ್ಲ. ಈ ಹೊತ್ತಿನಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡು ಹೆಚ್‌.ಡಿ. ಕುಮಾರಸ್ವಾಮಿ ಅವರನ್ನೇ ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಮಾಡುತ್ತಾರೆಂಬ ಸುದ್ದಿಯೂ ಹರಿದಾಡುತ್ತಿದೆ. ಇಂತಹ ಸನ್ನಿವೇಶದಲ್ಲಿ ಇಂದು ಬಿಜೆಪಿ ನಾಯಕರ ಜೊತೆ ಸೇರಿ ಹೆಚ್‌ಡಿಕೆ ಸುದ್ದಿಗೋಷ್ಠಿ ಕೂಡ ನಡೆಸಿದ್ದಾರೆ. ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ನಾನು ಮತ್ತು ಬೊಮ್ಮಾಯಿ ಒಟ್ಟಾಗಿ ಹೋರಾಡುತ್ತೇವೆ ಎಂದು ಹೆಚ್‌ಡಿಕೆ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ: ಹೆಚ್‌ಡಿಕೆ ಶಪಥ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article