ಟಾಲಿವುಡ್ ಹೆಸರಾಂತ ನಟ ವರುಣ್ ತೇಜ್ (Varun Tej) ಹಾಗೂ ಬಹುಕಾಲದ ಗೆಳತಿ ಲಾವಣ್ಯ (Lavanya) ಮದುವೆ (Marriage) ಆಗಸ್ಟ್ 24 ರಂದು ಇಟಲಿಯಲ್ಲಿ (Italy) ನಡೆಯಲಿದೆ ಎಂದು ಹೇಳಲಾಗುತ್ತಿದೆ. ಇಟಲಿಯ ಸುಂದರವಾದ ಸ್ಥಳವನ್ನು ಈಗಾಗಲೇ ಗೊತ್ತು ಮಾಡಲಾಗಿದ್ದು, ಕುಟುಂಬಸ್ಥರು ಮತ್ತು ಆಪ್ತರಷ್ಟೇ ಈ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರಂತೆ. ಮೊನ್ನೆಯಷ್ಟೇ ವರುಣ್ ಭಾವಿ ಪತ್ನಿಯ ಮನೆಗೆ ಕಾಫಿಗೆ ಹೋಗಿದ್ದರು. ಅಲ್ಲಷ್ಟು ವಿಷಯಗಳ ವಿನಿಮಯವಾಗಿವೆ.
ಹಲವು ವರ್ಷಗಳ ಪ್ರೀತಿಗೆ ಉಂಗುರದ ಮುದ್ರೆ ಒತ್ತುವ ಮೂಲಕ ಲಾವಣ್ಯ- ವರುಣ್ ತೇಜ್ ಎಂಗೇಜ್ ಆಗಿದ್ದರು. ಈಗ ಈ ಲವ್ ಬರ್ಡ್ಸ್ ಫಾರಿನ್‌ಗೆ ಹಾರಿದ್ದಾರೆ. ಭಾವಿ ಪತ್ನಿ ಲಾವಣ್ಯ ಜೊತೆ ವರುಣ್ ಕಾಫಿ ಡೇಟ್ ಮಾಡ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇಬ್ಬರ ವೇಕೆಷನ್‌ಗೆ ವರುಣ್ ಸಹೋದರಿ ನಿಹಾರಿಕಾ ಕೂಡ ಸಾಥ್ ನೀಡಿದ್ದಾರೆ.
ಮೆಗಾ ಪ್ರಿನ್ಸ್ ವರುಣ್-ಲಾವಣ್ಯ ಮೊದಲು ಭೇಟಿಯಾಗಿದ್ದು, 2017ರಲ್ಲಿ ಇಬ್ಬರು `ಮಿಸ್ಟರ್’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ವೇಳೆ ವರುಣ್ ತೇಜ್, ಲಾವಣ್ಯ ತ್ರಿಪಾಠಿ ಇಬ್ಬರೂ ಕ್ಲೋಸ್ ಆಗಿದ್ದರು. ಆರಂಭದಲ್ಲಿ ಸ್ನೇಹಿತರಾಗಿದ್ದವರು ಬರಬರುತ್ತಾ ಪ್ರೀತಿಯಲ್ಲಿ ಬಿದ್ದಿದ್ದರು. ಇಬ್ಬರೂ ಡೇಟಿಂಗ್ ಮಾಡುತ್ತಿದ್ದರೂ, ಅದು ಪಬ್ಲಿಕ್ ಆಗದಂತೆ ನೋಡಿಕೊಂಡಿದ್ದರು. ಹಲವು ವರ್ಷಗಳವರೆಗೂ ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯ ಗೊತ್ತೇ ಇರಲಿಲ್ಲ. ಆದರೆ, ‘ಅಂತರಿಕ್ಷಂ’ ಸಿನಿಮಾದ ವೇಳೆ ಇಬ್ಬರ ಬಗ್ಗೆ ಮೊದಲ ಬಾರಿಗೆ ಗಾಳಿಸುದ್ದಿ ಹಬ್ಬಿತ್ತು. ಅಲ್ಲಿಂದ ಇಬ್ಬರ ಡೇಟಿಂಗ್ ಸುದ್ದಿ ಚಾಲ್ತಿಗೆ ಬಂದಿತ್ತು. ಇದನ್ನೂ ಓದಿ:ಜುಲೈ 23ಕ್ಕೆ ವಿಶ್ವಕುಂದಾಪ್ರ ಕನ್ನಡ ದಿನಕ್ಕೆ ಸಿಎಂ, ರಿಷಬ್ ಶೆಟ್ಟಿ- ಪ್ರಮೋದ್ ಶೆಟ್ಟಿ ಸಾಥ್
ಆಗಾಗ ವರುಣ್, ಲಾವಣ್ಯ ಇಬ್ಬರೂ ಹಲವು ಕಾರ್ಯಕ್ರಮಗಳು ಹಾಗೂ ಪಾರ್ಟಿಗಳಲ್ಲಿ ಭೇಟಿಯಾಗುತ್ತಿದ್ದರು. ಇದು ಗಾಳಿಸುದ್ದಿಗೆ ಮತ್ತಷ್ಟು ತುಪ್ಪ ಸುರಿದಂತಾಗಿತ್ತು. ವರುಣ್, ತಮ್ಮ ಪ್ರೀತಿಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಬಯಸಿದ್ದರು. ಹೀಗಾಗಿ ಡಿಸೆಂಬರ್ 15 ಲಾವಣ್ಯ ಹುಟ್ಟುಹಬ್ಬದಂದು ಮದುವೆಗೆ ಪ್ರಪೋಸ್ ಮಾಡಿದ್ದರು. ಎರಡೂ ಮನೆಯವರು ಒಪ್ಪಿದರೂ, ಈ ಜೋಡಿ ಮದುವೆ ಬಗ್ಗೆ ಬಾಯ್ಬಿಟ್ಟಿರಲಿಲ್ಲ.
ಯಂಗ್ ಜೋಡಿ ವರುಣ್- ಲಾವಣ್ಯ ಅವರು ಹೈದರಾಬಾದ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿ ಎಂಗೇಜ್ ಆಗಿದ್ದಾರೆ. ಜೂನ್ 9ರ ರಾತ್ರಿ ಎರಡು ಕುಟುಂಬದವರು ಆಪ್ತರಷ್ಟೇ ಭಾಗಿಯಾಗಿದ್ದರು. ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್ ಅವರ ಇಡೀ ಕುಟುಂಬ, ಅಲ್ಲು ಅರ್ಜುನ್ ಫ್ಯಾಮಿಲಿ, ವೆಂಕಟೇಶ್ವರ ರಾವ್ ಕುಟುಂಬದವರಷ್ಟೇ ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಸದ್ಯ ಎಂಗೇಜ್ ಆಗಿರುವ ಈ ಜೋಡಿ ಈ ವರ್ಷದ ಅಂತ್ಯದಲ್ಲಿ ಮದುವೆ ಆಗಲಿದ್ದಾರೆ. ಎಂಗೇಜ್‌ಮೆಂಟ್‌ನಲ್ಲಿ ನಟಿ ಲಾವಣ್ಯ ಗಿಳಿ ಹಸಿರು ಸೀರೆಯಲ್ಲಿ ಮಿಂಚಿದ್ರೆ, ವರುಣ್ ಗೋಲ್ಡನ್ ಬಣ್ಣದ ಶೆರ್ವಾನಿಯಲ್ಲಿ ಹೈಲೆಟ್ ಆಗಿದ್ದಾರೆ. ನನ್ನ ಪ್ರೀತಿಯನ್ನ 2016ರಲ್ಲಿಯೇ ಕಂಡುಕೊಂಡಿದ್ದೆ ಎಂದು ನಟಿ ನಿಶ್ಚಿತಾರ್ಥದ ಫೋಟೋ ಸಮೇತ ಪೋಸ್ಟ್ ಮಾಡಿದ್ದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]