Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಉಪ ನಗರ ರೈಲು ಯೋಜನೆ ವಿಸ್ತರಣೆ: ಕಾರ್ಯಸಾಧ್ಯತಾ ವರದಿಗೆ ಅನುಮತಿ ಕೋರಿ ನೈರುತ್ಯ ರೈಲ್ವೆಗೆ ಪತ್ರ

Public TV
Last updated: July 24, 2023 10:12 pm
Public TV
Share
3 Min Read
Bengaluru Sub Urban Rail Project MB Patil Meeting
SHARE

– ರಾಜಧಾನಿಯ ಸುತ್ತಲಿನ ನಗರಗಳಿಗೆ ಸೌಲಭ್ಯ ಒದಗಿಸುವ ಇಚ್ಛೆ: ಎಂ ಬಿ ಪಾಟೀಲ್‌

ಬೆಂಗಳೂರು: ರಾಜಧಾನಿಯಲ್ಲಿನ ಸಂಚಾರ ದಟ್ಟಣೆ ನಿವಾರಣೆಯ ಗುರಿಯೊಂದಿಗೆ ಕೈಗೆತ್ತಿಕೊಂಡಿರುವ ಉಪನಗರ ರೈಲು ಯೋಜನೆಯನ್ನು ( Bengaluru Sub Urban Rail Project) ಸುತ್ತಮುತ್ತಲಿನ ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಾಗಡಿ, ಗೌರಿಬಿದನೂರು, ಬಂಗಾರಪೇಟೆಗೆ ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಯಸಾಧ್ಯತಾ ವರದಿ ಕೈಗೆತ್ತಿಕೊಳ್ಳಲು ರೈಲ್ವೆ ಸಚಿವಾಲಯವು ಅನುಮತಿ ನೀಡಬೇಕೆಂದು ಕೋರಿ ನೈರುತ್ಯ ರೈಲ್ವೆ (South Western Railway) ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆಯಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ (MB Patil) ತಿಳಿಸಿದ್ದಾರೆ.

ಉಪನಗರ ರೈಲು ಯೋಜನೆಯ ಪ್ರಗತಿ ಕುರಿತು ಸೋಮವಾರ ಇಲ್ಲಿ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದ (ಕೆ-ರೈಡ್‌) ಉನ್ನತ ಅಧಿಕಾರಿಗಳೊಂದಿಗೆ ಅವರು ಸೋಮವಾರ ಪರಿಶೀಲನಾ ಸಭೆ ನಡೆಸಿದರು. ಇದನ್ನೂ ಓದಿ: ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ಎಲ್ಲಾ ಕೋರ್ಸ್‌ಗಳಿಗೂ ಒಟ್ಟಿಗೆ ಸಿಇಟಿ ಸೀಟು ಹಂಚಿಕೆ – ಹೊಸ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತೆ?

sub urban railway bengaluru

ಈ ಬಗ್ಗೆ ಮಾತನಾಡಿದ ಅವರು, “ಹಂತ-1ರಲ್ಲಿ ಉಪನಗರ ರೈಲು ಯೋಜನೆ ಕಾಮಗಾರಿ (148.17 ಕಿ.ಮೀ.) ನಡೆಯುತ್ತಿದೆ. ಇದನ್ನು ಸುತ್ತಲಿನ ಹಲವು ನಗರಗಳಿಗೆ ವಿಸ್ತರಿಸುವ ಅಗತ್ಯವಿದೆ. ಈ ಸಂಬಂಧ ಜೂನ್‌ 6ರಂದು ಸಭೆ ನಡೆಸಲಾಗಿತ್ತು. ಕೆ-ರೈಡ್‌ ಈ ಪ್ರಸ್ತಾವನೆಗೆ ಅಂದು ತಾತ್ತ್ವಿಕ ಒಪ್ಪಿಗೆ ನೀಡಿತ್ತು. ಮುಂದಿನ ಹೆಜ್ಜೆಯಾಗಿ ಈಗ ನೈರುತ್ಯ ರೈಲ್ವೆಗೆ ಪತ್ರ ಬರೆಯಲಾಗಿದೆ” ಎಂದರು.

ಉಪನಗರ ರೈಲು ಯೋಜನೆಯ ಹಂತ-1ರ ಕಾಮಗಾರಿಗಳು ಅಬಾಧಿತವಾಗಿ ಮುಂದುವರಿದುಕೊಂಡು ಹೋಗಲಿವೆ. ಆದರೆ, ಹಂತ-2ನ್ನು 452 ಕಿ.ಮೀ.ಗಳಿಗೆ ವಿಸ್ತರಿಸಲು ಯೋಚಿಸಿದ್ದು, ಇದಕ್ಕೆ ಈಗಿನಿಂದಲೇ ಅಗತ್ಯ ಉಪಕ್ರಮಗಳನ್ನು ಕೈಗೊಳ್ಳುವ ಜರೂರಿದೆ. ನಿಯಮಗಳ ಪ್ರಕಾರ ರಾಜ್ಯ ಸರಕಾರದ ಸಂಸ್ಥೆಯು ಕಾರ್ಯಸಾಧ್ಯತಾ ವರದಿ ತಯಾರಿಸಲು ಸಾಧ್ಯವಿಲ್ಲ. ಇದನ್ನು ರೈಲ್ವೆ ಮಂಡಲಿಯೇ ಮಾಡಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಉಪನಗರಗಳು, ಮೈಸೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರಿಗೆ ಉಪಯೋಗವಾಗಲಿರುವ ಬೆಂಗಳೂರು ಉಪನಗರ ರೈಲ್ವೆ ಯೋಜನೆ- #BSRP ಕುರಿತಂತೆ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದೆ. ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. pic.twitter.com/I59nSvZO7L

— M B Patil (@MBPatil) July 24, 2023

ಇದೇ ಸಂದರ್ಭದಲ್ಲಿ ಅವರು, ಉಪನಗರ ರೈಲು ಯೋಜನೆಯ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು. ರೈಲು ವ್ಯವಸ್ಥೆಗೆ ಬೇಕಾದ ಬೋಗಿಗಳ ತಯಾರಿಕೆಗೆ ಬಿಡ್‌ ಅಂತಿಮಗೊಳಿಸಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಯೋಜನೆಯ ಕಾಮಗಾರಿಯನ್ನೂ ಖುದ್ದಾಗಿ ಪರಿಶೀಲಿಸಲಾಗುವುದು ಎಂದು ವಿವರಿಸಿದರು.

ಈ ಯೋಜನೆಗೆ 177.22 ಎಕರೆ ಭೂಮಿ ಅಗತ್ಯವಿತ್ತು. ಈ ಪೈಕಿ ಈಗಾಗಲೇ 164 ಎಕರೆಯ ಸ್ವಾಧೀನ ಮುಗಿದಿದೆ. ಆದರೆ ಉಳಿದ 12.39 ಎಕರೆ ಭೂಮಿ ರಕ್ಷಣಾ ಇಲಾಖೆ ಮತ್ತು ಸರಕಾರದ್ದಾಗಿದ್ದು, ಸ್ವಲ್ಪ ಕಗ್ಗಂಟಾಗಿದೆ. ಕೆ-ರೈಡ್‌ ಅಧಿಕಾರಿಗಳು ಸಂಬಂಧಿಸಿದವರ ಜತೆ ಮಾತುಕತೆ ನಡೆಸಿ, ಇದನ್ನು ಬೇಗನೆ ಬಗೆಹರಿಸಬೇಕು. ಯೋಜನೆಯ ಭಾಗವಾಗಿ ಸೋಲದೇವನಹಳ್ಳಿ ಮತ್ತು ದೇವನಹಳ್ಳಿಯಲ್ಲಿ ಎರಡು ಡಿಪೋ ನಿರ್ಮಿಸಲಾಗುವುದು ಎಂದು ಸಚಿವರು ನುಡಿದರು.

ಸಭೆಯಲ್ಲಿ ಕೆ-ರೈಡ್‌ ವ್ಯವಸ್ಥಾಪಕ ನಿರ್ದೇಶಕ ಗೌರವ್‌ ಗುಪ್ತ, ಕೆ- ರೈಡ್ ಯೋಜನಾ ನಿರ್ದೇಶಕ ರಾಜೇಂದ್ರಕುಮಾರ್‌ ಸಿಂಗ್‌ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

 

ಉಪನಗರ ರೈಲು ವಿಸ್ತರಣೆಯ ರೂಪುರೇಷೆ ಹೇಗೆ?
ಸದ್ಯಕ್ಕೆ ಪ್ರಗತಿಯಲ್ಲಿರುವ 148 ಕಿ.ಮೀ. ವ್ಯಾಪ್ತಿಯ ಉಪನಗರ ರೈಲು ಯೋಜನೆಯಲ್ಲಿ ಒಟ್ಟು ನಾಲ್ಕು ಕಾರಿಡಾರ್‌ಗಳಿವೆ. ಇದು ಕ್ರಮವಾಗಿ ಬೆಂಗಳೂರು ನಗರ ರೈಲು ನಿಲ್ದಾಣದಿಂದ ದೇವನಹಳ್ಳಿ (41.4 ಕಿ.ಮೀ), ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ (25.01 ಕಿ.ಮೀ), ಕೆಂಗೇರಿಯಿಂದ ವೈಟ್‌ಫೀಲ್ಡ್‌ (35.32 ಕಿ.ಮೀ) ಮತ್ತು ಹೀಳಲಿಗೆಯಿಂದ ರಾಜಾನುಕುಂಟೆವರೆಗೆ (46.25 ಕಿ.ಮೀ) ಉದ್ದವಿದೆ.

 

ಇದನ್ನು ಎರಡನೇ ಹಂತದಲ್ಲಿ ದೇವನಹಳ್ಳಿಯಿಂದ ಕೋಲಾರ (107 ಕಿ.ಮೀ), ಚಿಕ್ಕಬಾಣಾವರದಿಂದ ಡಾಬಸ್‌ಪೇಟೆ ಮೂಲಕ ತುಮಕೂರು (55 ಕಿ.ಮೀ), ಚಿಕ್ಕಬಾಣಾವರದಿಂದ ಮಾಗಡಿ (45 ಕಿ.ಮೀ), ಕೆಂಗೇರಿಯಿಂದ ಮೈಸೂರು (125 ಕಿ.ಮೀ), ವೈಟ್‌ಫೀಲ್ಡ್‌ನಿಂದ ಬಂಗಾರಪೇಟೆ (45 ಕಿ.ಮೀ), ಹೀಳಲಿಗೆಯಿಂದ ತಮಿಳುನಾಡಿನ ಹೊಸೂರು (23 ಕಿ.ಮೀ) ಮತ್ತು ರಾಜಾನುಕುಂಟೆಯಿಂದ ದೊಡ್ಡಬಳ್ಳಾಪುರದ ಮಾರ್ಗವಾಗಿ ಗೌರಿಬಿದನೂರಿನವರೆಗೆ (52 ಕಿ.ಮೀ) ವಿಸ್ತರಿಸಬೇಕೆಂಬುದು ಸಚಿವ ಎಂ ಬಿ ಪಾಟೀಲ ಅವರ ಚಿಂತನೆಯಾಗಿದೆ. ಇದರಿಂದಾಗಿ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬಂದು, ಇಲ್ಲಿರುವ ಉದ್ದಿಮೆಗಳಿಗೆ ಸುತ್ತಮುತ್ತಲ ನಗರ/ಪಟ್ಟಣಗಳಿಂದ ಉದ್ಯೋಗಿಗಳು ಸುಗಮವಾಗಿ ಬಂದು ಹೋಗಬಹುದು ಎನ್ನುವುದು ಅವರ ಆಶಯವಾಗಿದೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:bengalurukarnatakaSouth Western RailwaySub Urban Rail Projectಉಪನಗರ ರೈಲುಎಂಬಿ ಪಾಟೀಲ್ಕರ್ನಾಟಕಬೆಂಗಳೂರುಸಬ್ ಅರ್ಬನ್ ರೈಲು
Share This Article
Facebook Whatsapp Whatsapp Telegram

You Might Also Like

Iran Fires Missiles
Latest

ಸುರಕ್ಷಿತ ಸ್ಥಳಗಳಲ್ಲೇ ಇರಿ – ಇರಾನ್‌ ಮಿಸೈಲ್‌ ದಾಳಿ ಬೆನ್ನಲ್ಲೇ ಕತಾರ್‌ನಲ್ಲಿರೋ ಭಾರತೀಯರಿಗೆ ಎಚ್ಚರಿಕೆ

Public TV
By Public TV
7 hours ago
Iran Missiles
Latest

ಕತಾರ್‌ನಲ್ಲಿರುವ ಅಮೆರಿಕ ಸೇನಾ ನೆಲೆಯ ಮೇಲೆ ಇರಾನ್ ಪ್ರತೀಕಾರದ ದಾಳಿ

Public TV
By Public TV
7 hours ago
Mosquito Drone2
Latest

ಯುದ್ಧದಲ್ಲಿ ಯಾರಿಗೂ ಕಾಣದಂತೆ ದಾಳಿ ಮಾಡುತ್ತೆ ʻಸೊಳ್ಳೆ ಡ್ರೋನ್ʼ – ಏನಿದು ಹೊಸ ಅಸ್ತ್ರ?

Public TV
By Public TV
7 hours ago
Anantkumar Hegde Dabaspete
Bengaluru City

ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ಆರೋಪ – ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್

Public TV
By Public TV
8 hours ago
Aishwarya Gowda
Bengaluru City

2 ಕೋಟಿಗೂ ಅಧಿಕ ಮೌಲ್ಯದ ಫ್ಲ್ಯಾಟ್‌ ಸೇರಿ ʻಬಂಗಾರಿʼಗೌಡಳ 3.98 ಕೋಟಿ ಆಸ್ತಿ ಜಪ್ತಿ

Public TV
By Public TV
9 hours ago
DK Suresh ED
Bengaluru City

ಮಾಜಿ ಸಂಸದ ಡಿಕೆ ಸುರೇಶ್‌ಗೆ ಇಡಿ ಡ್ರಿಲ್ – ಜು.8ಕ್ಕೆ ಮತ್ತೆ ಬುಲಾವ್

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?