ವ್ಯಕ್ತಿಯ ತಲೆ ಮೇಲೆ ಒದ್ದು, ಮೂತ್ರ ವಿಸರ್ಜನೆ ಮಾಡಿ ದರ್ಪ – ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ

Public TV
1 Min Read
UP police

ಲಕ್ನೋ: ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದ ಮೇಲೆ ಮಲಗಿದ್ದ ಗಾಯಾಳುವಿನ ಮೇಲೆ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಮತ್ತೊಂದು ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

ಹೇಯಕೃತ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 30 ಸೆಕೆಂಡ್‌ಗಳ ವೀಡಿಯೋದಲ್ಲಿ ವ್ಯಕ್ತಿಯ ತಲೆಯ ಮೇಲೆ ಯುವಕನೊಬ್ಬ ಒದೆಯುತ್ತಿರುವ ದೃಶ್ಯವೂ ಇದೆ. ಯುವಕ ಮತ್ತು ಅವನ ಸ್ನೇಹಿತರು ಸಂತ್ರಸ್ತನನ್ನು ನಿಂದಿಸಿದ್ದಾರೆ. ಇದನ್ನೂ ಓದಿ: 500 ಕೋಟಿ ಭ್ರಷ್ಟಾಚಾರ: ಗೆಹ್ಲೋಟ್‌ ವಿರುದ್ಧ ಮಾಜಿ ಸಚಿವನಿಂದಲೇ ಬಾಂಬ್‌

ವೀಡಿಯೋ ವೈರಾಲ್‌ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ವೀಡಿಯೋ ಮೂರ್ನಾಲ್ಕು ತಿಂಗಳ ಹಳೆಯದು ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ನಂತರ, ಈ ಬಗ್ಗೆ ಆಗ್ರಾದ ಯಾವುದೇ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ದೂರು ದಾಖಲಿಸಿಲ್ಲ. ಬಂಧಿತನನ್ನು ಆದಿತ್ಯ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ: ಸುಪ್ರೀಂ ಸಲಹೆ

ಆರೋಪಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಗೆ ಯತ್ನ) ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ವೀಡಿಯೋದಲ್ಲಿದ್ದ ಇತರ ಯುವಕರಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಬಂಧಿತ ಯುವಕ ಆದಿತ್ಯನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಕಾನೂನು ಕ್ರಮ ಕೈಗೊಳ್ಳಲಾಗುವುದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Web Stories

Share This Article