‘BAD’ ಸಿನಿಮಾದಲ್ಲಿ ಪ್ರೀತಿಯ ಪ್ರತಿನಿಧಿಯಾದ ಅಪೂರ್ವ ಭಾರದ್ವಾಜ್

Public TV
2 Min Read
Apoorva Bhardwaj 1

ಸಾಕಷ್ಟು ಜನಪ್ರಿಯ ಧಾರಾವಾಹಿಗಳು ಹಾಗೂ ಇತ್ತೀಚೆಗೆ ತೆರೆಕಂಡ ‘ನಾನು, ಅದು ಮತ್ತು ಸರೋಜ’ ಚಿತ್ರದಲ್ಲಿ ಅಭಿನಯಿಸಿರುವ ನಟಿ ಅಪೂರ್ವ ಭಾರದ್ವಾಜ್ (Apoorva Bhardwaj) ಇದೀಗ ಪಿ.ಸಿ.ಶೇಖರ್ (PC Shekhar) ನಿರ್ದೇಶನದ ‘BAD’ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Apoorva Bhardwaj 3

ಈ ಚಿತ್ರದಲ್ಲಿ ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಿವೆ ಎಂದು ಮೊದಲೆ ತಿಳಿಸಲಾಗಿತ್ತು. ಆ ಪೈಕಿ ಕಾಮ ಎಂಬ‌ ವರ್ಗವನ್ನು ಅನು ಎಂಬ ಪಾತ್ರದ ಮೂಲಕ ತೋರಿಸಲಾಗುತ್ತಿದೆ. ಈ ಪಾತ್ರದಲ್ಲಿ  ಅಪೂರ್ವ ಭಾರದ್ವಾಜ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಕಾಮವನ್ನು ಪ್ರೀತಿಗೆ ಬದಲಾಯಿಸಿ ತೋರಿಸಲಾಗುತ್ತಿದೆ. ಇದನ್ನೂ ಓದಿ:ತಮಿಳು ‘ಜೈಲರ್’ ವಿರುದ್ದ ಮಲಯಾಳಂ ‘ಜೈಲರ್’ ರಿಲೀಸ್: ರಜನಿ ಸಿನಿಮಾಗೆ ಟಕ್ಕರ್

Bad

ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡು, ತಂದೆಯ ಆಸರೆಯಲ್ಲಿ ಬೆಳೆದ ಹುಡುಗಿ ಅನು.  ತಾಯಿ ಪ್ರೀತಿ ಕಾಣದ ಈ ಹುಡುಗಿಗೆ ಯಾರ ಬಳಿ ಹೇಗೆ ಪ್ರೀತಿ ವ್ಯಕ್ತಪಡಿಸಬೇಕೆಂದು ತಿಳಿದಿರುವುದಿಲ್ಲ. ಈ ಪಾತ್ರಕ್ಕೆ ಮಾತು ಕಡಿಮೆ. ಕಣ್ಣಿನಲ್ಲೇ ಭಾವನೆಗಳನ್ನು ಹೇಳುವ ಹಾಗೂ ಗುಂಗುರು ಕೂದಲುಳ್ಳ ಸಹಜ ಸುಂದರಿಯಂತೆ ಕಾಣುವ ಪಾತ್ರವಿದು.‌ ಹಾಗಾಗಿ ಅಪೂರ್ವ ಅವರ ಹಿಂದಿನ ಧಾರಾವಾಹಿ ಹಾಗೂ ಚಿತ್ರಗಳನ್ನು ನೋಡಿ, ಈ ಪಾತ್ರಕ್ಕೆ ಇವರೆ ಸರಿ ಹೊಂದುತ್ತಾರೆ ಎಂದು ಅಪೂರ್ವ ಅವರನ್ನು ಆಯ್ಕೆ ಮಾಡಿಕೊಂಡಿರುವುದಾಗಿ ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.

Apoorva Bhardwaj 2

ಅಪೂರ್ವ ಅವರು ಬಹಳ ಅದ್ಭುತವಾಗಿ ಅಭಿನಯಿಸಿದ್ದಾರೆ ಹಾಗೂ ಚಿತ್ರದಲ್ಲಿ ಅವರ ಪಾತ್ರ ಬರುವ ಕಡೆಯೆಲ್ಲಾ ಪಿಂಕ್(ಗುಲಾಬಿ ಬಣ್ಣ) ಶೇಡ್ ನಲ್ಲಿ ಚಿತ್ರಿಸಲಾಗಿದೆ ಎನ್ನುತ್ತಾರೆ ನಿರ್ದೇಶಕರು. ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ  ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರೀತಿಯ ರಾಯಭಾರಿ ಚಿತ್ರದ ಮೂಲಕ ಜನರ ಮನಗೆದ್ದಿರುವ  ನಕುಲ್ ಗೌಡ (Nakul Gowda) ಈ  ಚಿತ್ರದಲ್ಲಿ ಕ್ರೋಧವನ್ನು ಪ್ರತಿನಿಧಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್, ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article