– ಭಾರತ ಎಂದು ಹೆಸರಿದ್ದ ಮಾತ್ರಕ್ಕೆ ಅದು ಭಾರತವಾಗೋದಿಲ್ಲ ಎಂದ ಪ್ರಧಾನಿ
ನವದೆಹಲಿ: ಈಸ್ಟ್ ಇಂಡಿಯಾ ಕಂಪನಿ, PFI, ಇಂಡಿಯನ್ ಮುಜಾಹಿದೀನ್‌ನಲ್ಲೂ ಭಾರತ ಎನ್ನುವ ಪದವಿದೆ. ಭಾರತ ಎಂದು ಹೆಸರಿದ್ದ ಮಾತ್ರಕ್ಕೆ ಅದು ಭಾರತವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದರು.
ಬಿಜೆಪಿ ಸಂಸದೀಯ ಸಭೆಯಲ್ಲಿ (Parliament Session) ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಬಗ್ಗೆ ಮಾತನಾಡಿದ ಅವರು, ವಿರೋಧ ಪಕ್ಷಗಳ ನಾಯಕರನ್ನ ವ್ಯಂಗ್ಯ ಮಾಡಿದರು. ಇದನ್ನೂ ಓದಿ: 2021ಕ್ಕೆ ಹೋಲಿಸಿದರೆ 2022ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು 30% ಹೆಚ್ಚಳ – NWC
- Advertisement
ಮಣಿಪುರದಲ್ಲಿ (Manipur) ನಡೆಯುತ್ತಿರುವ ಜನಾಂಗೀಯ ಸಂಘರ್ಷಕ್ಕೆ ಸಂಬಂಧಿಸಿದಂತೆ ಸಂಸತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದು, ಸಂಸತ್ ಅಧಿವೇಶನದಲ್ಲಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಸಂಸದೀಯ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದ ಮೋದಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
- Advertisement
ಸಭೆಯಲ್ಲಿ ಬಿಜೆಪಿ ಸಂಸದರನ್ನ ಉದ್ದೇಶಿಸಿ ಮಾತನಾಡುತ್ತಾ, ಇಂತಹ ದಿಕ್ಕು ತೋಚದ ವಿರೋಧವನ್ನ ನಾನೆಂದೂ ನೋಡಿಲ್ಲ ಎಂದರಲ್ಲದೇ ಈಸ್ಟ್ ಇಂಡಿಯಾ ಕಂಪನಿ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಂತಹ ಹೆಸರುಗಳನ್ನ ಪ್ರಸ್ತಾಪಿಸಿ, ಕೇವಲ ದೇಶದ ಹೆಸರನ್ನು ಬಳಸಿಕೊಂಡು ಜನರನ್ನ ದಾರಿತಪ್ಪಿಸಲು ಸಾಧ್ಯವಿಲ್ಲ. ಜನರ ಬೆಂಬಲದೊಂದಿಗೆ 2024ರ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಾಂವಿಧಾನಿಕ ಜವಾಬ್ದಾರಿ, ಹೊಣೆಗಾರಿಕೆಯಿಂದ ಮೋದಿ ಸರ್ಕಾರ ಓಡಿ ಹೋಗುವಂತಿಲ್ಲ: ಖರ್ಗೆ ಟೀಕೆ
ಮುಂದಿನ ಅವಧಿಯಲ್ಲಿ ಭಾರತವು ವಿಶ್ವದ 3ನೇ ಅತಿದೊಡ್ಡ ಆರ್ಥಿಕ ದೇಶವಾಗಿ ಬೆಳೆಯಲಿದೆ. 2024ರ ಚುನಾವಣೆಯಲ್ಲೂ ಬಿಜೆಪಿ ಎನ್‌ಡಿಎ ಬೆಂಬಲದೊಂದಿಗೆ ಅಧಿಕಾರಕ್ಕೆ ಬರಲಿದೆ. ಪ್ರತಿಪಕ್ಷಗಳು ಚದುರಿಹೋಗಿವೆ ಮತ್ತು ಹತಾಶವಾಗಿವೆ. ನಾವು ಹೆಚ್ಚು ಕಾಲ ಅಧಿಕಾರದಲ್ಲಿ ಇರಬಾರದು ಎಂಬುದು ಪ್ರತಿಪಕ್ಷಗಳ ಧೋರಣೆ ಇದ್ದಂತೆ ಕಾಣುತ್ತಿದೆ ಎಂದು ಪ್ರಧಾನಿ ಹೇಳಿದರು.
Web Stories