ಉಡುಪಿ ವೀಡಿಯೋ ಕೇಸ್‌ – ಸಿಎಂ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ

Public TV
1 Min Read
shakunthala bjp worker

ಬೆಂಗಳೂರು: ಉಡುಪಿ (Udupi) ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವನ್ನು ಟೀಕಿಸುವ ಭರದಲ್ಲಿ ಸಿಎಂ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ (Shakunthala) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಟ್ವಿಟ್ಟರ್‌ನಲ್ಲಿ ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್‌ ಹಾಕಿದ್ದ ಬಿಜೆಪಿ (BJP) ಕಾರ್ಯಕರ್ತೆ ಶಕುಂತಲಾ ವಿರುದ್ಧ ಹೈಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.  ಇದನ್ನೂ ಓದಿ: ವೀಡಿಯೋ ಹಲವು ಬಾರಿ ಫಾರ್ವರ್ಡ್ ಆಗಿದೆ: ಯಶ್‍ಪಾಲ್ ಸುವರ್ಣ ಹೊಸ ಬಾಂಬ್

ಶಕುಂತಲಾ ಅವರನ್ನು ಹೈಗ್ರೌಂಡ್ ಪೊಲೀಸರು ಬಂಧಿಸಿ ಸ್ಟೇಷನ್ ಬೇಲ್ ಮೇಲೆ ರಿಲೀಸ್ ಮಾಡಿದ್ದಾರೆ. ಠಾಣೆಯಿಂದ ನೇರವಾಗಿ ಬಿಜೆಪಿ ಕಚೇರಿ ತೆರಳಿ ತಮ್ಮ ಪಕ್ಷದ ನಾಯಕರೊಂದಿಗೆ ಅವರು ಚರ್ಚೆ ನಡೆಸಿದರು.

BJP UDUPI

ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ಶೌಚಾಲಯದಲ್ಲಿ ಕೆಲ ವಿದ್ಯಾರ್ಥಿನಿಯರು ಮೊಬೈಲ್‌ ಇಟ್ಟು ಮತ್ತೊಬ್ಬ ವಿದ್ಯಾರ್ಥಿನಿಯ ವೀಡಿಯೋ ಸೆರೆ ಹಿಡಿದಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿದ್ಯಾರ್ಥಿನಿಯರ ಮೊಬೈಲ್‌ಗಳನ್ನು ಎಫ್‌ಎಸ್‌ಎಲ್‌ಗೆ ತನಿಖೆಗೆ ರವಾನಿಸಲಾಗಿದೆ.

ವೀಡಿಯೋ ಚಿತ್ರೀಕರಣ ವಿಚಾರ ಕಾಲೇಜು ಆಡಳಿತ ಮಂಡಳಿಗೆ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯರನ್ನು ಕರೆಸಿ ಬುದ್ದಿಮಾತು ಹೇಳಿ, ವೀಡಿಯೋ ಡಿಲೀಟ್‌ ಮಾಡಿಸಲಾಗಿದೆ. ಅಷ್ಟೇ ಅಲ್ಲದೇ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಕಾಲೇಜು ತಿಳಿಸಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವ್ಯಾಪಕ ಪ್ರತಿಭಟನೆ ನಡೆಸುತ್ತಿದೆ. ಇದನ್ನೂ ಓದಿ: ಬುರ್ಖಾ ಧರಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರನ್ನ ಬಸ್ ಹತ್ತಲು ಬಿಡದ ಡ್ರೈವರ್ ಅಮಾನತು

ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿ ವರೆಗೂ ಶಾಸಕ ಯಶ್‌ಪಾಲ್‌ ಸುವರ್ಣ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳನ್ನು ಡಿಬಾರ್‌ ಮಾಡಬೇಕು. ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

Web Stories

Share This Article