ಎಕ್ಸ್‌ಪ್ರೆಸ್ ವೇ ನಿರ್ಮಾಣದ ವೇಳೆ ಕ್ರೇನ್ ಕುಸಿದು 16 ಮಂದಿ ಕಾರ್ಮಿಕರು ದುರ್ಮರಣ

Public TV
2 Min Read
crane collapse maharashtra

ಮುಂಬೈ: ಸಮೃದ್ಧಿ ಎಕ್ಸ್‌ಪ್ರೆಸ್ ವೇಯ (Samruddhi Expressway) ಮೂರನೇ ಹಂತದ ನಿರ್ಮಾಣದ ವೇಳೆ ಸೇತುವೆಯ ಚಪ್ಪಡಿಯ ಮೇಲೆ ಕ್ರೇನ್ (Crane) ಕುಸಿದು ಬಿದ್ದಿದ್ದು, 16 ಮಂದಿ ಕಾರ್ಮಿಕರು (Workers) ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ (Maharashtra) ಥಾಣೆ (Thane) ಜಿಲ್ಲೆಯಲ್ಲಿ ನಡೆದಿದೆ.

ಸೋಮವಾರ ಮಧ್ಯರಾತ್ರಿ 12 ಗಂಟೆಯ ವೇಳೆ ಘಟನೆ ನಡೆದಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೊಬೈಲ್ ಗ್ಯಾಂಟ್ರಿ ಕ್ರೇನ್ ಅನ್ನು ಸೇತುವೆ ನಿರ್ಮಾಣದಲ್ಲಿ ಮತ್ತು ಹೆದ್ದಾರಿ ನಿರ್ಮಾಣ ಯೋಜನೆಗಳಲ್ಲಿ ಪ್ರಿಕಾಸ್ಟ್ ಬಾಕ್ಸ್‌ಗಳನ್ನು ಸ್ಥಾಪಿಸಲು ಬಳಸಲಾಗುತ್ತದೆ. ಇದನ್ನೂ ಓದಿ: ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ – ಹರಿಯಾಣದಲ್ಲಿ ಹಿಂಸಾಚಾರ, ಇಬ್ಬರು ಸಾವು

crane collapse

ಮುಂಬೈನಿಂದ 80 ಕಿಲೋ ಮೀಟರ್ ದೂರದಲ್ಲಿರುವ ಶಹಪುರ್ ತೆಹಸಿಲ್ ಸರ್ಲಾಂಬೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಉಗ್ರ ಅಫ್ಸರ್ ಪಾಷಾ ಮಂಗಳೂರು ಸ್ಫೋಟದ ಮಾಸ್ಟರ್ ಮೈಂಡ್ – ಶಾರೀಕ್‌ಗೆ ಜೈಲಿನಲ್ಲೇ ತರಬೇತಿ

ಮಂಗಳವಾರ ಮುಂಜಾನೆ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಎಂಎಸ್‌ಆರ್‌ಡಿಸಿ ಸಚಿವ ದಾದಾ ಭೂಸೆ, ಅವಶೇಷಗಳ ಅಡಿಯಲ್ಲಿ ಇನ್ನಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯ ಮುಂದುವರೆಯುತ್ತಿದೆ ಎಂದರು. ಅಧಿಕಾರಿಗಳ ಪ್ರಕಾರ ಕನಿಷ್ಟ ಆರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಲ್ಲಿ ನಾಲ್ವರನ್ನು ಗುಂಡಿಕ್ಕಿ ಕೊಂದ ಆರ್‌ಪಿಎಫ್ ಪೇದೆ

ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: 5 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆಗೈದ ಪಾಪಿ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article