ಭೋಪಾಲ್: ಮಧ್ಯಪ್ರದೇಶದ (Madhya Pradesh) ಸರ್ಕಾರಿ ಶಾಲಾ ಶಿಕ್ಷಕರೊಬ್ಬರ ಹೆಸರಿಗೆ 7 ಕೋಟಿ ರೂ. ತೆರಿಗೆ ನೋಟಿಸ್ (Tax Notice) ಬಂದಿದೆ. ನೋಟಿಸ್ ಕಂಡು ಶಿಕ್ಷಕಿಯ ಕುಟುಂಬಸ್ಥರೇ ದಿಗ್ಭ್ರಮೆಗೊಂಡಿದ್ದಾರೆ. ಏಕೆಂದರೆ 2013ರಲ್ಲೇ ಆ ಶಿಕ್ಷಕಿ ಸಾವನ್ನಪ್ಪಿದ್ದಾರೆ. ನೋಟೀಸ್ ಕೋಡ 2017-18ರ ಮೌಲ್ಯಮಾಪನಕ್ಕೆ ಸಂಬಂಧಿಸಿದ್ದಾಗಿದೆ.
ಶಿಕ್ಷಕಿ (Teacher) ಕುಟುಂಬದವರು ಮಾತ್ರವಲ್ಲ, ಆದಿವಾಸಿಗಳ ಪ್ರಾಬಲ್ಯ ಹೆಚ್ಚಾಗಿರುವ ಬೇತುಲ್ ಜಿಲ್ಲೆಯ 44 ಮಂದಿಗೆ 1 ರಿಂದ 10 ಕೋಟಿ ರೂ.ಗಳ ವರೆಗೆ ತೆರಿಗೆ ನೋಟೀಸ್ ಬಂದಿದೆ ಎಂದು ಆದಾಯ ತೆರಿಗೆ ಇಲಾಖೆ (Income Tax Department) ಮೂಲಗಳು ತಿಳಿಸಿವೆ. ಇದನ್ನೂ ಓದಿ: 88% ರಷ್ಟು 2 ಸಾವಿರ ರೂ. ನೋಟುಗಳು ಬ್ಯಾಂಕಿಗೆ ವಾಪಸ್ ಆಗಿವೆ: ಆರ್‌ಬಿಐ
ಉಷಾ ಸೋನಿ ಎಂಬವರು ಪಟಖೇಡ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. ಕಳೆದ ಜುಲೈ 26 ರಂದು ಆಕೆಯ ಕುಟುಂಬಕ್ಕೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿದ್ದು, 7.55 ಕೋಟಿ ತೆರಿಗೆ ಪಾವತಿಗೆ ಆದೇಶ ನೀಡಿತ್ತು. ನಂತರ ಅವರ ಮಗ ಪವನ್ ಸೋನಿ ʻನನ್ನ ತಾಯಿ 2013ರ ನವೆಂಬರ್ 16ರಂದೇ ದೀರ್ಘಕಾಲಿಕ ಅನಾರೋಗ್ಯದಿಂದ ನಿಧನರಾದರು. ಅಲ್ಲದೇ ಈ ನೋಟಿಸ್ 2017-18ರ ಮೌಲ್ಯ ಮಾಪನಕ್ಕೆ ಸಂಬಂಧಿಸಿದ್ದಾಗಿದೆ. ದಾಖಲೆಯಲ್ಲಿ ನ್ಯಾಚುರಲ್ ಕಾಸ್ಟಿಂಗ್ ಕಂಪನಿ ಎಂದು ಉಲ್ಲೇಖಿಸಲಾಗಿದೆ. ಅದು ಇನ್ನೂ ಖರೀದಿ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ನನ್ನ ತಾಯಿಯ ಪ್ಯಾನ್‌ಕಾರ್ಡ್ ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ನೋಟಿಸ್ ಬಗ್ಗೆ ನಮಗೇನು ತಿಳಿದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ವಿಶ್ವ ನಾಯಕರೂ ಮೋದಿಯನ್ನ ʻಬಾಸ್ʼ ಅಂತಾರೆ – ಮಹಾರಾಷ್ಟ್ರ ಸಿಎಂ ಶ್ಲಾಘನೆ
ಅಲ್ಲದೇ ಕಬ್ಬಣದ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ತಿಂಗಳಿಗೆ 5 ರಿಂದ 7 ಸಾವಿರ ರೂ. ಸಂಪಾದಿಸುವ ನಿತಿನ್ ಜೈನ್ ಎಂಬ ವ್ಯಕ್ತಿಗೆ 1.26 ಕೋಟಿ ರೂ. ತೆರಿಗೆ ಬಂದಿರೋದನ್ನ ಕಂಡು ಆಘಾತಕ್ಕೊಳಗಾಗಿದ್ದಾರೆ. ಅವರು ಆದಾಯ ತೆರಿಗೆ ಖಾತೆ ತೆರೆಯಲು ಹೋದಾಗ, ತಮಿಳುನಾಡಿನ ಕುರ್ಟಾಲಂನಲ್ಲಿ ಅವರ ಹೆಸರಲ್ಲಿ ಖಾತೆ ಇರುವುದು ಕಂಡುಬಂದಿದೆ. 2014-15ರಲ್ಲಿ ಅವರ ಹೆಸರಿನಲ್ಲಿ ಖಾತೆ ತೆರೆಯಲಾಗಿದ್ದು, ಇದೇ ಖಾತೆಯಲ್ಲಿ ದೊಡ್ಡ ಪ್ರಮಾಣದ ವಹಿವಾಟು ನಡೆದಿದೆ. ಈ ಕಾರಣಕ್ಕಾಗಿ ನಿತೀಶ್ ಜೈನ್‌ಗೆ ನೋಟಿಸ್ ಬಂದಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]