ವಿಜಯನಗರ: ಅಧಿಕಾರ ದುರುಪಯೋಗ ಮಾಡಿಕೊಂಡು, ವಿಶ್ವವಿದ್ಯಾಲಯಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಹಂಪಿ ಕನ್ನಡ ವಿಶ್ವವಿದ್ಯಾಲಯದ (Hampi Kannada University) ವಿಶ್ರಾಂತ ಕುಲಪತಿ ಡಾ. ಮಲ್ಲಿಕಾಘಂಟಿ (Dr. Mallika Ghanti) ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಉದ್ದೇಶಪೂರ್ವಕವಾಗಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಸುಬ್ಬಣ್ಣ ರೈ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಗ್ರಾಹಕರೇ ಎಚ್ಚರ – ಮನೆ ಮನೆಗೆ ವಿತರಣೆಯಾಗುವ ಗ್ಯಾಸ್ ಸಿಲಿಂಡರ್‌ನಲ್ಲಿ ಭಾರೀ ವಂಚನೆ
ಅವರ ಅಧಿಕಾರದ ಅವದಿಯಲ್ಲಿ 2015-2016 ಮತ್ತು 2016-2017ರ ಸಾಲಿನಲ್ಲಿ ಕೆಲ ಕಾಮಗಾರಿಗಳು ಮಾಡಿದ್ದಾರೆ. 13.56 ಲಕ್ಷ ರೂ. ಆರ್ಥಿಕ ನಷ್ಟ ವಿವಿಗೆ ಮಾಡಲಾಗಿದೆ ಎಂದು ದೂರು ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: 200 ರನ್‌ಗಳ ಭರ್ಜರಿ ಗೆಲುವು – ವಿಂಡೀಸ್ ವಿರುದ್ಧ ಸತತ 13ನೇ ಏಕದಿನ ಸರಣಿ ಗೆದ್ದ ಭಾರತ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]