ಚಿಕ್ಕಬಳ್ಳಾಪುರ: ಆಟೋಗೆ ದಾರಿ ಬಿಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಕೆಎಸ್‌ಆರ್‌ಟಿಸಿ (KSRTC) ಚಾಲಕನ ಮೇಲೆ ನಾಲ್ವರು ತೀವ್ರವಾಗಿ ಹಲ್ಲೆ ನಡೆಸಿರುವ ಘಟನೆ ದೊಡ್ಡಬಳ್ಳಾಪುರದ (Doddaballapur) ಮಾಡೇಶ್ವರ ಗ್ರಾಮದ ಬಳಿ ನಡೆದಿದೆ.
ಗ್ರಾಮದ ಕಿತ್ತೂರು ರಾಣಿ ವಸತಿ ಶಾಲೆ ಸಮೀಪ ಆಟೋಗೆ ಸೈಡ್ ನೀಡಲಿಲ್ಲ ಎಂದು ನಾಲ್ವರು ಬಸ್ ತಡೆದಿದ್ದಾರೆ. ಬಳಿಕ ಚಾಲಕ ಪ್ರಸನ್ನ ಅವರನ್ನು ನಿಂದಿಸಿದ್ದು, ಮನಸೋ ಇಚ್ಛೆ ಥಳಿಸಿದ್ದಾರೆ. ಈ ವೇಳೆ ಚಾಲಕನ ರಕ್ಷಿಸಲು ಮುಂದಾದ ನಿರ್ವಾಹಕ ಹಾಗೂ ಪ್ರಯಾಣಿಕರನ್ನು ಯುವಕರು ತಳ್ಳಿದ್ದಾರೆ. ಬಳಿಕ ಅಲ್ಲಿಂದ ಯುವಕರು ಪರಾರಿಯಾಗಿದ್ದರು. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಚಾಲಕ ಪ್ರಸನ್ನ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಇದನ್ನೂ ಓದಿ: ನಿರಂತರ ಮಳೆಗೆ ಒದ್ದೆಯಾದ ಕಲ್ಲಿದ್ದಲು: ವಿದ್ಯುತ್ ಉತ್ಪಾದನೆಯಲ್ಲಿ ಕುಂಠಿತ
ಬಳಿಕ ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ (Police) ಠಾಣೆಗೆ ದೂರು ನೀಡಲಾಗಿತ್ತು. ದೂರು ದಾಖಲಿಸಿಕೊಂಡ ಇನ್ಸ್‌ಪೆಕ್ಟರ್ ಹರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಗಲಿಬಿಲಿಕೋಟೆ ಗ್ರಾಮದ ಗೋವಿಂದರಾಜು, ಹನುಮಂತರಾಜು, ನರಸಿಂಹರಾಜು ಎಂಬುವರನ್ನು ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ತಲೆ ಮರೆಸಿಕೊಂಡಿರುವ ಮತ್ತೋರ್ವ ಆರೋಪಿಯ ಪತ್ತೆಗೆ ಬಲೆ ಬೀಸಲಾಗಿದೆ. ಇದನ್ನೂ ಓದಿ: ಪತ್ನಿಯ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ನೇಣಿಗೆ ಶರಣು!
Web Stories