ಮೊಬೈಲ್ ಚಾರ್ಜರ್ ಪಿನ್‌ಗೆ ಬಾಯಿ ಹಾಕಿ 8 ತಿಂಗಳ ಕಂದಮ್ಮ ಸಾವು

Public TV
1 Min Read
Uttara Kannada

ಕಾರವಾರ: ಪೋಷಕರ ನಿರ್ಲಕ್ಷ್ಯದಿಂದಾಗಿ ಮೊಬೈಲ್ ಚಾರ್ಜರ್‌ನಿಂದ (Mobile Charger) ಶಾಕ್ ಹೊಡೆದು 8 ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರದ ಸಿದ್ದರದಲ್ಲಿ ನಡೆದಿದೆ.

ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ಎಂಬವರ 8 ತಿಂಗಳ ಮಗು ಸಾನಿಧ್ಯ ವಿದ್ಯುತ್ ಶಾಕ್‌ಗೆ ಬಲಿಯಾದ ಕಂದಮ್ಮ. ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್‌ಅನ್ನು ಆಫ್ ಮಾಡದೇ ನಿರ್ಲಕ್ಷ್ಯವಹಿಸಿದ್ದರು. ಇದನ್ನೂ ಓದಿ: ಆಟೋಗೆ ಸೈಡ್ ಬಿಡಲಿಲ್ಲ ಅಂತ KSRTC ಚಾಲಕನ ಮೇಲೆ ಹಲ್ಲೆ – ಮೂವರು ಅರೆಸ್ಟ್

ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್ ಹೊಡೆದು ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 4 ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಕಲಾನಿರ್ದೇಶಕ ದೇಸಾಯಿ ನೇಣಿಗೆ ಶರಣು

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article